ಭಾರತದಲ್ಲಿ ಕಳೆದ ಐದು ವರ್ಷಗಳಲ್ಲಿ 140 ಖಾಸಗಿ ವಿಶ್ವವಿದ್ಯಾಲಯಗಳು ಸೇರಿದಂತೆ 242 ವಿಶ್ವವಿದ್ಯಾಲಯಗಳನ್ನು ತೆರೆಯಲಾಗಿದೆ. ನಂತರ 90 ರಾಜ್ಯ ಸಾರ್ವಜನಿಕ ವಿಶ್ವವಿದ್ಯಾಲಯಗಳನ್ನು ತೆರೆಯಲಾಗಿದೆ.ಪ್ರಸ್ತುತ, ದೇಶದಲ್ಲಿ 23 ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(IIT) ಮತ್ತು 20 ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (IIM) ಕಾರ್ಯನಿರ್ವಹಿಸುತ್ತಿವೆ.
ಕೇಂದ್ರೀಯ ವಿದ್ಯಾಲಯದಲ್ಲಿ 12,099 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಎಂದು ಶಿಕ್ಷಣ ರಾಜ್ಯ ಸಚಿವ ಡಾ ಸುಬಾಸ್ ಸರ್ಕಾರ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.