ಮೈಸೂರು: ಮೈಸೂರು ಜಿಲ್ಲೆಯಲ್ಲಿ 2011ರ ಜನಗಣತಿ ಪ್ರಕಾರ 44,094 ಮಂದಿ ವಿಶೇಷಚೇತನರು ಇದ್ದಾರೆ. ಇವರೆಲ್ಲರೂ ಶೇ. 40ರಷ್ಟು ಅಂಗವೈಕಲ್ಯವನ್ನು ಹೊಂದಿದ್ದಾರೆ. ಆದರೆ, ಇವರಲ್ಲಿ ಬಹುತೇಕರು ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದಾರೆ.
ಮೈಸೂರು ಜಿಲ್ಲೆಯಲ್ಲಿ ವಾಸಿಸುತ್ತಿರುವ ವಿಶೇಷಚೇತನರಿಗೆ ಸ್ವಂತ ಸೂರು ಕಲ್ಪಿಸುವ ಉದ್ದೇಶದಿಂದ ಜಿಲ್ಲಾಡಳಿತ ‘ಪ್ರತ್ಯೇಕ ಕಾಲೊನಿ’ ನಿರ್ಮಾಣ ಮಾಡಲು ಚಿಂತನೆ ನಡೆಸಿದೆ. ಇದು ವಿಶೇಷಚೇತನರ ಬದುಕಿನಲ್ಲಿ ಹೊಸ ಭರವಸೆಯನ್ನು ಮೂಡಿಸಿದೆ.