ಜುಲೈ 12ರಂದು ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಸಂಸದ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾದ ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.
ಜೂನ್ 25 ರಂದು ಉಪಚುನಾವಣೆ ಅಧಿಸೂಚನೆಯನ್ನು ಹೊರಡಿಸಲಾಗುವುದು ಮತ್ತು ನಾಮಪತ್ರ ಸಲ್ಲಿಸಲು ಜುಲೈ 2 ಕೊನೆಯ ದಿನಾಂಕವಾಗಿದೆ.
ಜುಲೈ 3 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಜುಲೈ 5 ಕೊನೆಯ ದಿನವಾಗಿದೆ. ಜುಲೈ 12 ರಂದು ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ.