ಜಾಗತಿಕ ರೇಟಿಂಗ್ ಏಜೆನ್ಸಿಯಾದ ಫಿಚ್ (Fitch Ratings) ಪ್ರಕಾರ ಭಾರತದ ಆರ್ಥಿಕತೆ 2024-25ರ ಸಾಲಿನ ಹಣಕಾಸು ವರ್ಷದಲ್ಲಿ ಶೇ. 7.2ರಷ್ಟು ಹೆಚ್ಚಾಗಬಹುದು.
ಈ ಹಿಂದೆ ಮಾಡಿದ ಅಂದಾಜಿನಲ್ಲಿ ಶೇ. 7ರಷ್ಟು ಜಿಡಿಪಿ ಹೆಚ್ಚಬಹುದು ಎಂದು ಅದು ಅಭಿಪ್ರಾಯಪಟ್ಟಿತ್ತು. ಈಗ 20 ಮೂಲಾಂಕಗಳಷ್ಟು ನಿರೀಕ್ಷೆ ಹೆಚ್ಚಿಸಿದೆ. ಹೂಡಿಕೆಗಳು ಹೆಚ್ಚುತ್ತಿರುವುದು, ಗ್ರಾಹಕರ ವಿಶ್ವಾಸ ಹೆಚ್ಚುತ್ತಿರುವುದು ಆರ್ಥಿಕ ಬೆಳವಣಿಗೆಗೆ ಪೂರಕವಾಗಿದೆ ಎಂಬುದು ಫಿಚ್ ರೇಟಿಂಗ್ಸ್ನ ಅನಿಸಿಕೆಯಾಗಿದೆ.