ಜೂನ್ 29 ರಂದು ಯಾತ್ರೆ ಪ್ರಾರಂಭವಾದಾಗಿನಿಂದ ಕಳೆದ 13 ದಿನಗಳಲ್ಲಿ ಸುಮಾರು 2.66 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳು ಅಮರನಾಥ ಯಾತ್ರೆ ನೆರವೇರಿಸಿದ್ದು,ಈ ಬಾರಿ ಅಮರನಾಥ ಯಾತ್ರೆಗೆ ಆಗಮಿಸುವ ಯಾತ್ರಿಗಳ ಸಂಖ್ಯೆಯಲ್ಲಿ ಯಾವುದೇ ಇಳಿಮುಖವಾಗಿಲ್ಲ ಮತ್ತು ಯಾತ್ರಾರ್ಥಿಗಳ ಉತ್ಸಾಹ ಮುಂದುವರೆದಿದೆ ಎಂದು ಅಮರನಾಥ ದೇವಾಲಯ ಮಂಡಳಿ ಅಧಿಕಾರಿಗಳು ಹೇಳಿದ್ದಾರೆ.
ಈ ಗುಹೆಯು ಕಾಶ್ಮೀರ ಹಿಮಾಲಯದಲ್ಲಿ ಸಮುದ್ರ ಮಟ್ಟದಿಂದ 3,888 ಮೀಟರ್ ಎತ್ತರದಲ್ಲಿದೆ. ಗುಹೆ ದೇಗುಲವನ್ನು ತಲುಪಲು ದಕ್ಷಿಣ ಮತ್ತು ಉತ್ತರ ಬೇಸ್ ಕ್ಯಾಂಪ್ ನಿಂದ ಹೆಲಿಕಾಪ್ಟರ್ ಸೇವೆ ಬಳಸಿದ 10,000 ಕ್ಕೂ ಹೆಚ್ಚು ಯಾತ್ರಿಕರು ಇದರಲ್ಲಿ ಸೇರಿದ್ದಾರೆ.ಈ ವರ್ಷದ ಯಾತ್ರೆಯು 52 ದಿನಗಳ ನಂತರ ಆಗಸ್ಟ್ 29 ರಂದು ಶ್ರಾವಣ ಪೂರ್ಣಿಮಾ ಮತ್ತು ರಕ್ಷಾ ಬಂಧನ ಹಬ್ಬಗಳೊಂದಿಗೆ ಮುಕ್ತಾಯಗೊಳ್ಳಲಿದೆ.