ಕರ್ನಾಟಕ ಸರ್ಕಾರದ ನಿರ್ದೇಶನದಂತೆ, ಕರ್ನಾಟಕ ತಾತರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2024(K-SET 2024) ಅನ್ನು 24.11.2024ನೇ ಭಾನುವಾರದಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲು ಯೋಜಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕೆಸೆಟ್ -2024 ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಈ ಕೆಳಗಿನಂತಿದೆ.
1.ಅಧಿಸೂಚನೆ ಹೊರಡಿಸಲಾಗುವ ದಿನಾಂಕ: 13.07.2024
2.ಆನ್ಲೃನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ:22.07.2024
3.ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22.08.2024
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ :26.08.2024
- ಪರೀಕ್ಷಾ ದಿನಾಂಕ: 24.11.2024
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ :26.08.2024
KSET-2024 ಪರೀಕ್ಷೆಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಬೇರೆ ಯಾವುದೇ ಮೂಲಗಳ ಮೂಲಕ ಅರ್ಜಿ ಸಲ್ಲಿಸಿದರೆ ಪರಿಗಣಿಸಲಾಗುವುದಿಲ್ಲ. KEA ವೆಬ್ಸೈಟ್ http://kea.ar.nic.in ಮೂಲಕ ಅರ್ಜಿ ಸಲ್ಲಿಸಬಹುದು.
KSET 2024ರ ಪರೀಕ್ಷೆಯನ್ನು 41 ವಿಷಯಗಳಲ್ಲಿ ನಡೆಸಲಾಗುತ್ತಿದ್ದು, ಪರೀಕ್ಷಾ ಕೇಂದ್ರಗಳ ವಿವರಗಳನ್ನು ಪುಟ ಸಂಖ್ಯೆ 07 ಮತ್ತು 08 ರಲ್ಲಿ ನೀಡಲಾಗಿದೆ. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ಯಾವುದೇ ವಿಶ್ವವಿದ್ಯಾಲಯ/ ಪ್ರಥಮ ದರ್ಜೆ ಪದವಿ ಕಾಲೇಜು/ ಉನ್ನತ ಶಿಕ್ಷಣ ಸಂಸ್ಥೆ(ಸರ್ಕಾರಿ, ಅನುದಾನಿತ ಹಾಗೂ ಖಾಸಗಿ) ಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಗೊಳ್ಳಲು ಅರ್ಹರಾಗಿರುತ್ತಾರೆ. ಹಾಗೂ ಆಯಾ ಸಂಸ್ಥೆಗಳ ನಿಯಮ ಮತ್ತು ಕಾಯ್ದೆಗಳಿಗೆ ಒಳಪಟ್ಟಿರುತ್ತಾರೆ.
ವಿಕಲ ಚೇತನ(PwD), ತೃತೀಯ ಲಿಂಗ, ಪರಿಶಿಷ್ಟ ಜಾತಿ(SC), ಪರಿಶಿಷ್ಟ ಪಂಗಡ(ST), ಇತರೆ ಹಿಂದುಳಿದ ವರ್ಗಗಳ( ಪ್ರವರ್ಗ-1,2,A2B,3A,3B) ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಇರುವಂತಿರಬೇಕು.
ಅರ್ಹತಾ ನಿಬಂಧನೆಗಳು
೧.ಅಭ್ಯರ್ಥಿಗಳು ಯು.ಜಿ.ಸಿ ಯಿಂದ ಮಾನ್ಯತೆ ಪಡೆದಿರುವ ವಿಶ್ವ ವಿದ್ಯಾಲಯ/ ಉನ್ನತ ಶಿಕ್ಷಣ ಸಂಸ್ಥೆಯಿಂದ ಸ್ನಾತಕೋತ್ತರ ಪದವಿ ಅಥವಾ ಸಮಾನವಾದ ಪರೀಕ್ಷೆಗಳಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಶೇ.55% ರಷ್ಟು ಅಂಕಗಳನ್ನು ಪಡೆದಿರಬೇಕು(ಪೂರ್ಣಾಂಕಿತಗೊಳಿಸಿರಬಾರದು). ಪರಿಶಿಷ್ಟ ಜಾತಿ ಮತ್ತು ಪಂಗಡ(SC/ST), ಇತರೆ ಹಿಂದುಳಿದ ವರ್ಗಗಳ(ಪ್ರವರ್ಗ-1,2A,2B,3A,3B), ವಿಕಲಚೇತನರು(PwD), ಮತ್ತು ತೃತೀಯ ಲಿಂಗ ಗುಂಪಿಗೆ ಸೇರಿದ ಅಭ್ಯರ್ಥಿಗಳು ಶೇ.50%ರಷ್ಟು ಅಂಕಗಳನ್ನು(ಪೂರ್ಣಾಂಕಿತಗೊಳಿಸಿರಬಾರದು) ಪಡೆದಿರಬೇಕು.
೨. ಸ್ನಾತಕೋತ್ತರ ಪದವಿ ಪಡೆದವರು ಹಾಗೂ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ(ಪ್ರಥಮ & ದ್ವಿತೀಯ) ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಕೆಸೆಟ್ ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ.
ಆದರೆ, ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳಿಗೆ ಪರೀಕ್ಷೆ ತೆಗೆದುಕೊಳ್ಳಲು ತಾತ್ಕಾಲಿಕವಾಗಿ ಮಾತ್ರ ಪ್ರವೇಶ ನೀಡಲಾಗುವುದು. ಅವರು ಸ್ನಾತಕೋತ್ತರ ಪದವಿ ಅಥವಾ ಸಮಾನವಾದ ಪರೀಕ್ಷೆಗಳನ್ನು ಸಾಮಾನ್ಯ ವರ್ಗದವರು ಶೇ.55%ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡ(SC ,ST),ಪ್ರವರ್ಗ-1,2A,2B,3A,3B), ವಿಕಲಚೇತನರು(PwD), ಮತ್ತು ತೃತೀಯ ಲಿಂಗ ಗುಂಪಿಗೆ ಸೇರಿದ ಅಭ್ಯರ್ಥಿಗಳು ಶೇ.50%ರಷ್ಟು ಅಂಕಗಳನ್ನು ಪಡೆದು ಅರ್ಹತೆ ಹೊಂದಿ ಕೆಸೆಟ್ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ ಎರಡು ವರ್ಷದೊಳಗಾಗಿ ಅವರು ಸ್ನಾತಕೋತ್ತರ ಪದವಿಯ ಅಂಕ ಪಟ್ಟಿಗಳನ್ನು ಸಲ್ಲಿಸಿದರೆ ಮಾತ್ರ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪ್ರಮಾಣ ಪತ್ರ ಪಡೆಯಬಹುದು. ಇಲ್ಲವಾದಲ್ಲಿ ಅಂತಹವರ ಅರ್ಹತೆಯನ್ನು ರದ್ದುಪಡಿಸಲಾಗುವುದು. ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.