ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣನ ಅಬ್ಬರ ಜೋರಾಗಿದ್ದು
ದಿನಾಂಕ 16.0702024ರಂದು ಕೂಡ ರೆಡ್ ಅಲರ್ಟ್ ಘೋಷಿಸಲಾಗಿದೆ.
ಆದ್ದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಶಾಲೆಗಳು, ಅನುದಾನಿತ ಹಾಗೂ ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
ಸಾರ್ವಜನಿಕರ ಹಿತ ದೃಷ್ಟಿಯಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಇನ್ನೂ ಕೆಲವೊಂದು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು ಸಾರ್ವಜನಿಕರು ಕಟ್ಟು ನಿಟ್ಟಾಗಿ ಪಾಲಿಸಲು ವಿನಂತಿಸಿದೆ. ಶಿಥಿಲಗೊಂಡ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ, ಆಶ್ರಯಕ್ಕೆ ಬಳಸದಂತೆ ಹೇಳಿದೆ.
ತಗ್ಗು ಪ್ರದೇಶ, ನದಿ ಸಮುದ್ರ ತೀರಗಳಿಂದ ಸಾರ್ವಜನಿಕರು ದೂರವಿರುವಂತೆ ಸೂಚನೆ ನೀಡಲಾಗಿದೆ. ಮೀನುಗಾರಿಕೆ ಮಾಡಲು ಮೀನುಗಾರರು ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಮಳೆಯಿಂದಾಗಿ ಯಾವುದೇ ರೀತಿಯ ಪ್ರಕೃತಿ ವಿಕೋಪಗಳು ಸಂಭವಿಸಿದ್ದಲ್ಲಿ ತಕ್ಷಣ ಸಂಬಂಧ ಪಟ್ಟ ಪಂಚಾಯತ್ ಅಥವಾ ಅಧಿಕಾರಿಗಳಿಗೆ ತಿಳಿಸುವಂತೆ ಮನವಿ ಮಾಡಿದೆ.
ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಏನೇ ಸಮಸ್ಯೆಗಳು ಎದುರಾದರೂ