ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.20ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ತಿಳಿಸಿದ್ದಾರೆ.
1) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ( 20-07-2024 )
2) ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ, ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು.
3) ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ದ್ರವಾಸಿಗರು ತೆರಳದಂತೆ ಜಾಗೃತ ವಹಿಸುವುದು.
4) ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.
5) ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಮತ್ತು ವಿದ್ಯುತ್ ಕಂಬ/ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸುವುದು.
6) ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವುದು.
ಜಿಲ್ಲಾಧಿಕಾರಿ ಮುಲೈ ಮುಗಿಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.