ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣನ ಅಬ್ಬರ ಮುಂದುವರೆದಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಆಗಸ್ಟ್ 1 ರಂದೂ ಜಿಲ್ಲೆಯ ಅಂಗನವಾಡಿಯಿಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.ಇಂದು ಮಧ್ಯಾಹ್ನದವರೆಗೆ ಮಳೆ ಕೊಂಚ ಮಟ್ಟಿಗೆ ಕಡಿಮೆಯಾಗಿದ್ದರೂ ಮಧ್ಯಾಹ್ನದ ನಂತರ ಜಿಲ್ಲೆಯಾದ್ಯಂತ ಎಡೆಬಿಡದೆ ಮಳೆ ಸುರಿಯುತ್ತಿದೆ. ಅಲ್ಲಲ್ಲಿ ಗುಡ್ಡ ಕುಸಿತದ ಭೀತಿ ಇದ್ದು ಚರಂಡಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.
ಸರ್ಕಾರಿ-ಖಾಸಗಿ-ಅನುದಾನಿತ ಶಾಲಾ ಕಾಲೇಜುಗಳಿಗೆ ರಜೆ
ಆದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಅಂಗನವಾಡಿ , ಸರ್ಕಾರಿ-ಖಾಸಗಿ-ಅನುದಾನಿತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿಯ ಪ್ರಕಟಣೆ ತಿಳಿಸಿದೆ.