ದ್ವಿತೀಯ ಪಿಯುಸಿ ಪರೀಕ್ಷಾ ಸಮಯ 2 ಗಂಟೆ 45 ನಿಮಿಷಕ್ಕೆ ಇಳಿಕೆ

Table of Content

ದ್ವಿತೀಯ ಪಿಯುಸಿ ಪರೀಕ್ಷಾ ಅವಧಿಯನ್ನು 15 ನಿಮಿಷ ಕಡಿತಗೊಳಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆಯನ್ನು ಹೊರಡಿಸಿದೆ.

ಇಲ್ಲಿಯವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತರ ಬರೆಯಲು 3:00 ಅವಧಿ ಇರುತ್ತಿತ್ತು. ಆದರೆ ಹೊಸ ನಿಯಮದಂತೆ ಪರೀಕ್ಷಾ ಅವಧಿಯು 2 ಗಂಟೆ 45 ನಿಮಿಷ ಇರಲಿದೆ.

ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತರ ಬರೆಯುವ ಅವಧಿಯನ್ನು ಎರಡು ಗಂಟೆ 45 ನಿಮಿಷ ನಿಗದಿ ಮಾಡಿದ್ದರೂ, ಪ್ರಶ್ನೆಗಳನ್ನು ಓದಿಕೊಳ್ಳುವುದಕ್ಕಾಗಿ ಹೆಚ್ಚುವರಿ 15 ನಿಮಿಷಗಳನ್ನು ನೀಡಲಾಗುತ್ತದೆ. ಈ ಹಿಂದೆ 3:00 ಅವಧಿ ಇದ್ದಾಗಲೂ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಓದಿಗಾಗಿ ಹೆಚ್ಚುವರಿಯಾಗಿ 15 ನಿಮಿಷ ನೀಡಲಾಗುತ್ತಿತ್ತು.

ಹಿಂದಿನ ಪರೀಕ್ಷೆಗಳಲ್ಲಿ ಪ್ರತಿ ವಿಷಯದ ಲಿಖಿತ ಪರೀಕ್ಷೆಯನ್ನು 100 ಅಂಕಗಳಿಗೆ ನಡೆಸಲಾಗುತ್ತಿತ್ತು. ಆದರೆ 2023-24ನೇ ಸಾಲಿನಿಂದ ಪ್ರಾಯೋಗಿಕ ಪರೀಕ್ಷೆ ಹಾಗೂ ಆಂತರಿಕ ಮೌಲ್ಯಮಾಪನಕ್ಕೆ ಪ್ರತ್ಯೇಕ ಅಂಕಗಳನ್ನು ನಿಗದಿ ಮಾಡಿಟ್ಟ ಕಾರಣ ಲಿಖಿತ ಪರೀಕ್ಷೆಯ ಅಂಕಗಳನ್ನು ಕಡಿತ ಮಾಡಲಾಗಿತ್ತು. ಆದರೆ ಪರೀಕ್ಷಾ ಅವಧಿಯನ್ನು ಮಾತ್ರ ಕಡಿತ ಮಾಡಿರಲಿಲ್ಲ.

ಪಠ್ಯ ವಿಷಯಗಳಾದ ಭೌತಶಾಸ್ತ್ರ, ರಸಾಯನಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗನಕ ವಿಜ್ಞಾನ, ಗೃಹ ವಿಜ್ಞಾನ ಸೇರಿದಂತೆ ಪ್ರಾಯೋಗಿಕ ಪರೀಕ್ಷೆ ಇರುವ ಕೆಲ ವಿಷಯಗಳಲ್ಲಿ ನಿಖಿತ ಪರೀಕ್ಷೆಯನ್ನು 70 ಅಂಕಗಳಿಗೆ ಹಾಗೂ ಪ್ರಾಯೋಗಿಕ ಪರೀಕ್ಷೆ ಇಲ್ಲದ ವಿಷಯಗಳಲ್ಲಿ 80 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ವಿದ್ಯಾರ್ಥಿಗಳು 80 ಅಂಕಗಳಿಗೆ ಉತ್ತರಿಸಬೇಕಾದ ವಿಷಯಗಳ ಪ್ರಶ್ನೆ ಪತ್ರಿಕೆಗಳು ಒಟ್ಟು 120 ಅಂಕಗಳ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಅವುಗಳಲ್ಲಿ 80 ಅಂಕಗಳಿಗಷ್ಟೇ ಉತ್ತರಿಸಬೇಕು. 70 ಅಂಕಗಳಿಗೆ ಉತ್ತರಿಸಬೇಕಾದ ವಿಷಯಗಳ ಪ್ರಶ್ನೆ ಪತ್ರಿಕೆಗಳು 105 ಅಂಕಗಳ ಪ್ರಶ್ನೆಗಳನ್ನು ಒಳಗೊಂಡಿರುತ್ತವೆ. ಅವುಗಳಲ್ಲಿ 70 ಅಂಕಗಳಿಗಷ್ಟೇ ಉತ್ತರಿಸಬೇಕು. ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸುವಾಗ ಪಠ್ಯದ ಹೊರಟಾದ ಪ್ರಶ್ನೆಗಳಿಗೆ ಅವಕಾಶ ನೀಡಬಾರದು. ಪಠ್ಯಪುಸ್ತಕದಲ್ಲಿ ಇರುವ ವಿಷಯಗಳ ಮೇಲೆ ಅಷ್ಟೇ ಪ್ರಶ್ನೆಗಳನ್ನು ಸಿದ್ಧಪಡಿಸುವುದು ಕಡ್ಡಾಯ ಎಂದು ಪರೀಕ್ಷಾ ಮಂಡಳಿ ಹೇಳಿದೆ.

ಪ್ಯಾರಾಲಿಂಪಿಕ್ಸ್ 2024ರಲ್ಲಿ 29 ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ ಭಾರತ

Tags :
Subscribe
Notify of
guest
0 Comments
Inline Feedbacks
View all comments

Bharathavani News Desk

Bharathavani is a prominent Kannada news portal based in Puttur, Karnataka, dedicated to delivering comprehensive coverage of local, state, national, and international news.

ಇನ್ನಷ್ಟು ಸುದ್ದಿಗಳು

ಧನಾತ್ಮಕ ಪತ್ರಿಕೋದ್ಯಮಕ್ಕೆ ಬೆಂಬಲ ನೀಡಿ

ಈಗಲೇ ನಮ್ಮ ವಾಟ್ಸಪ್ ಗ್ರೂಪ್ ಸೇರಿಕೊಳ್ಳಿ ಹಾಗೂ ನಮ್ಮ ಈ ಪ್ರಯತ್ನದಲ್ಲಿ ನೀವೂ ಭಾಗಿದಾರರಾಗಿ

ಇತ್ತೀಚಿನಸುದ್ದಿ

ಇನ್ನೊ ಓದಿ

ಭಾರಧ್ವಾಜಾಶ್ರಮ : ವೇದಾಧ್ಯಯನಕ್ಕೊಂದು ಗುರುಕುಲ..

By Balu Deraje  ಭಾರತದ ಪ್ರಾಚೀನ ಹಿಂದು ಧರ್ಮದ ಸಾಹಿತ್ಯ ಎಂದರೆ ವೇದಗಳು ಎಂದು ಪರಿಗಣಿಸಲಾಗಿದೆ. ಇದು ಸಂಸ್ಕೃತ ದಲ್ಲಿ ರಚಿಸಲ್ಪಟ್ಟಿದೆ. ಈ ವೇದಗಳನ್ನು ವ್ಯಾಸ ಮಹರ್ಷಿಗಳು ಪಠ್ಯ ರೂಪದಲ್ಲಿ 4 ವಿಭಾಗಗಳಾಗಿ ವಿಂಗಡಿಸಿ ಇವರ ನಾಲ್ಕು ಶಿಷ್ಯರಾದವರು 1: ಋಗ್ವೇದವನ್ನು ಪೈಲ ಮಹರ್ಷಿ, 2: ಯಜುರ್ವೇದ ವನ್ನು ವೈಶಂಪಾಯನ ಮಹರ್ಷಿ, 3:ಸಾಮವೇದ ವನ್ನು ಜೈಮಿನಿ ಮಹರ್ಷಿ, 4: ಅಥರ್ವಣ ವೇದವನ್ನು ಸುಮಂತ ಮಹರ್ಷಿ ಗಳು ಪ್ರಚಾರ ಮಾಡಿದರು. ನಂತರ ಗುರುಕುಲ ಪದ್ದತಿಯು ಆರಂಭಗೊಂಡಿತು ಎಂದು ಉಲ್ಲೇಖವಿದೆ.. ನಾಡಿನ...
suvarna vidhana soudha, belgaum, legislative building

ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಜುಲೈ 12 ರಂದು ಉಪಚುನಾವಣೆ

ಜುಲೈ 12ರಂದು ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಸಂಸದ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾದ ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. ಜೂನ್ 25 ರಂದು ಉಪಚುನಾವಣೆ ಅಧಿಸೂಚನೆಯನ್ನು ಹೊರಡಿಸಲಾಗುವುದು ಮತ್ತು ನಾಮಪತ್ರ ಸಲ್ಲಿಸಲು ಜುಲೈ 2 ಕೊನೆಯ ದಿನಾಂಕವಾಗಿದೆ. ಜುಲೈ 3 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಜುಲೈ 5 ಕೊನೆಯ ದಿನವಾಗಿದೆ. ಜುಲೈ 12 ರಂದು ಸಂಜೆ 5 ಗಂಟೆಗೆ ಮತ...
arrows, tendency, businesswoman

ಭಾರತದ ಜಿಡಿಪಿ ಶೇ. 7.2ರಷ್ಟು ಬೆಳೆಯಬಹುದು: ನಿರೀಕ್ಷೆ ಹೆಚ್ಚಿಸಿದ ಫಿಚ್ ರೇಟಿಂಗ್ಸ್

ಜಾಗತಿಕ ರೇಟಿಂಗ್ ಏಜೆನ್ಸಿಯಾದ ಫಿಚ್ (Fitch Ratings) ಪ್ರಕಾರ ಭಾರತದ ಆರ್ಥಿಕತೆ 2024-25ರ ಸಾಲಿನ ಹಣಕಾಸು ವರ್ಷದಲ್ಲಿ ಶೇ. 7.2ರಷ್ಟು ಹೆಚ್ಚಾಗಬಹುದು. ಈ ಹಿಂದೆ ಮಾಡಿದ ಅಂದಾಜಿನಲ್ಲಿ ಶೇ. 7ರಷ್ಟು ಜಿಡಿಪಿ ಹೆಚ್ಚಬಹುದು ಎಂದು ಅದು ಅಭಿಪ್ರಾಯಪಟ್ಟಿತ್ತು. ಈಗ 20 ಮೂಲಾಂಕಗಳಷ್ಟು ನಿರೀಕ್ಷೆ ಹೆಚ್ಚಿಸಿದೆ. ಹೂಡಿಕೆಗಳು ಹೆಚ್ಚುತ್ತಿರುವುದು, ಗ್ರಾಹಕರ ವಿಶ್ವಾಸ ಹೆಚ್ಚುತ್ತಿರುವುದು ಆರ್ಥಿಕ ಬೆಳವಣಿಗೆಗೆ ಪೂರಕವಾಗಿದೆ ಎಂಬುದು ಫಿಚ್ ರೇಟಿಂಗ್ಸ್​ನ ಅನಿಸಿಕೆಯಾಗಿದೆ.
cricket, sports, athlete

200 ಸಿಕ್ಸರ್‌ ಪೂರ್ಣಗೊಳಿಸಿ ವಿಶ್ವ ದಾಖಲೆ ಬರೆದ ರೋಹಿತ್‌ ಶರ್ಮಾ

ಭಾರತ ತಂಡದ ನಾಯಕ ರೋಹಿತ್‌ ಶರ್ಮಾ, ಆಸ್ಟ್ರೇಲಿಯಾ ವಿರುದ್ದದ ತಮ್ಮ ಕೊನೆಯ ಸೂಪರ್‌-8ರ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ನಡೆಸಿದರು. ಆ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 200 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದ್ದಾರೆ ಹಾಗೂ ವಿಶ್ವ ದಾಖಲೆಯನ್ನು ಬರೆದಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ ಸಿಡಿಸಿದ ಬ್ಯಾಟರ್ಸ್‌ 1. ರೋಹಿತ್‌ ಶರ್ಮಾ-157 ಪಂದ್ಯಗಳಿಂದ 203 ಸಿಕ್ಸರ್‌2. ಮಾರ್ಟಿನ್‌ ಗಪ್ಟಿಲ್‌-122 ಪಂದ್ಯಗಳಿಂದ 173 ಸಿಕ್ಸರ್‌3. ಜೋಸ್‌ ಬಟ್ಲರ್‌- 123 ಪಂದ್ಯಗಳಿಂದ 137 ಸಿಕ್ಸರ್‌4. ಗ್ಲೆನ್‌ ಮ್ಯಾಕ್ಸ್‌ವೆಲ್‌-113 ಪಂದ್ಯಗಳಿಂದ 133...

Get in Touch

ಧನಾತ್ಮಕ ಪತ್ರಿಕೋದ್ಯಮಕ್ಕೆ ಬೆಂಬಲ ನೀಡಿ

ಈಗಲೇ ನಮ್ಮ ವಾಟ್ಸಪ್ ಗ್ರೂಪ್ ಸೇರಿಕೊಳ್ಳಿ ಹಾಗೂ ನಮ್ಮ ಈ ಪ್ರಯತ್ನದಲ್ಲಿ ನೀವೂ ಭಾಗಿದಾರರಾಗಿ

Technology Partner

© Copyright 2024 – All Rights reserved

0
Would love your thoughts, please comment.x
()
x