ಬಂತು ಸ್ಮಾರ್ಟ್ ಡಿಜಿಟಲ್ ಲಗೇಜ್ ಲಾಕರ್, ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ!

Table of Content

ಮೆಟ್ರೋ ರೈಲು ನಿಗಮ ಮಂಡಳಿ (BMRCL) ಇದೀಗ ತನ್ನ ಪ್ರಯಾಣಿಕರಿಗೆ ಗುಡ್ ನ್ಯೂಸ್ ಒಂದನ್ನು ನೀಡಿದ್ದು, ಸ್ಮಾರ್ಟ್ ಡಿಜಿಟಲ್ ಲಗೇಜ್ ಲಾಕರ್ ಒದಗಿಸುವುದಾಗಿ ತಿಳಿಸಿದೆ. 

ನಮ್ಮಮೆಟ್ರೋ ಸ್ಮಾರ್ಟ್ ಡಿಜಿಟಲ್ ಲಗೇಜ್ ಲಾಕರ್
ಪ್ರಯಾಣಿಕರಿಗೆ ಅನುಕೂಲವಾಗಲೆಂದು ಸ್ಮಾರ್ಟ್ ಡಿಜಿಟಲ್ ಲಗೇಜ್ ಲಾಕರ್‌ಗಳ ಸೌಲಭ್ಯವನ್ನು ಒದಗಿಸುತ್ತದೆ. ಪ್ರಯಾಣಿಕರು ತಮ್ಮ ಲಗೇಜ್ ಇಟ್ಟು ಬೇರೆಡೆ ತೆರಳಬೇಕಾದರೆ ಇದಕ್ಕಾಗಿ ಸ್ನೇಹಿತರು, ಸಂಬಂಧಿಕರ ಮನೆಯನ್ನು ಹುಡುಕುವ ಅಗತ್ಯವಿಲ್ಲ. ಈ ಲಾಕರ್‌ಗಳಲ್ಲಿ ನಿಮ್ಮ ಲಗೇಜ್ ಇಟ್ಟು ಆರಾಮಾಗಿ ನಿಮ್ಮ ಕೆಲಸ ಮುಗಿಸಿ ಬರಬಹುದು. 

ಇದನ್ನೂ ಓದಿ: ಇಂದಿನಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ

Namma Metro ಪ್ರಯಾಣಿಕರು ಸೇಫ್ ಕ್ಲಾಕ್ ಸಂಸ್ಥೆಯ ಸ್ಮಾರ್ಟ್ ಡಿಜಿಟಲ್ ಲಾಕರ್​ನಲ್ಲಿ ತಮ್ಮ ಲಗೇಜ್ ಇಟ್ಟು ನಿಶ್ಚಿಂತೆಯಿಂದ ತಮ್ಮ ಕೆಲಸ ಮುಗಿಸಿ ಬರಬಹುದು. ಪ್ರಯಾಣಿಕರು ಕಿಯೋಸ್ಟ್‌ನಲ್ಲಿನ ಆಯ್ಕೆಗಳನ್ನು ಭರ್ತಿ ಮಾಡಿ ತಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿದರೆ  ಇದರಲ್ಲಿ ಒಂದು ಓ‌ಟಿ‌ಪಿ ಬರುತ್ತದೆ. ಇದನ್ನು ಕಿಯೋಸ್ಟ್‌ನಲ್ಲಿ ನಮೂದಿಸಿದ ಕೂಡಲೇ ಪ್ರಯಾಣಿಕರಿಗೆ ತಮ್ಮ ಬ್ಯಾಗ್‌ಗಳನ್ನು ಇಡಲು ಡಿಜಿಟಲ್ ಲಾಕರ್ ಲಭ್ಯವಾಗುತ್ತದೆ. ವಿಶೇಷವೆಂದರೆ ಪ್ರಯಾಣಿಕರೇ ಬಂದು ಮತ್ತೆ ಓಟಿಪಿ ನಮೂದಿಸಿ ಈ ಲಾಕ್ ತೆರೆಯುವವರೆಗೂ “ಸ್ಮಾರ್ಟ್ ಡಿಜಿಟಲ್ ಲಗೇಜ್ ಲಾಕರ್” ತೆರೆಯಲು ಸಾಧ್ಯವಾಗುವುದಿಲ್ಲ. ಹಾಗಾಗಿ, ಪ್ರಯಾಣಿಕರು ಸೇಫ್ ಲಾಕ್ ನಲ್ಲಿ ಇಟ್ಟಿರುವ ತಮ್ಮ ಲಗೇಜ್ ಬಗ್ಗೆ ಚಿಂತಿಸುವ ಅಗತ್ಯವಿರುವುದಿಲ್ಲ. 

ಸ್ಮಾರ್ಟ್ ಡಿಜಿಟಲ್ ಲಾಕರ್​ಗೆ ತಗಲುವ ವೆಚ್ಚ: 


ಗಮನಾರ್ಹವಾಗಿ ಈ ಸ್ಮಾರ್ಟ್ ಡಿಜಿಟಲ್ ಲಾಕರ್​ನಲ್ಲಿ ಸಾಮಾನ್ಯ ಗಾತ್ರದ 4ರಿಂದ 5 ಬ್ಯಾಗ್‌ಗಳನ್ನು ಇಡಬಹುದಾಗಿದೆ. ಈ ಲಾಕರ್​ನಲ್ಲಿ 6 ಗಂಟೆಗಳ ಕಾಲ  2-3 ಬ್ಯಾಗ್‌ಗಳನ್ನು ಇಡಲು 70 ರೂ. ಶುಲ್ಕ ಪಾವತಿಸಬಹುದು. ಇದೇ ಸಮಯದಲ್ಲಿ ನಾಲ್ಕೈದು ಬ್ಯಾಗ್‌ಗಳನ್ನು ಇಡಲು 100 ರೂ. ಶುಲ್ಕ ಪಾವತಿಸಬೇಕಾಗುತ್ತದೆ. ಅದೇ ರೀತಿ 12 ಗಂಟೆಗಳ ಕಾಲ ಲಗೇಜ್ ಇಡಲು 120 ರೂ. ಗಳಿಂದ 160 ರೂ.ಗಳವರೆಗೆ ಪಾವತಿಸಬೇಕಾಗಬಹುದು.  

Tags :
Subscribe
Notify of
guest
0 Comments
Inline Feedbacks
View all comments

Bharathavani News Desk

Bharathavani is a prominent Kannada news portal based in Puttur, Karnataka, dedicated to delivering comprehensive coverage of local, state, national, and international news.

ಇನ್ನಷ್ಟು ಸುದ್ದಿಗಳು

ಧನಾತ್ಮಕ ಪತ್ರಿಕೋದ್ಯಮಕ್ಕೆ ಬೆಂಬಲ ನೀಡಿ

ಈಗಲೇ ನಮ್ಮ ವಾಟ್ಸಪ್ ಗ್ರೂಪ್ ಸೇರಿಕೊಳ್ಳಿ ಹಾಗೂ ನಮ್ಮ ಈ ಪ್ರಯತ್ನದಲ್ಲಿ ನೀವೂ ಭಾಗಿದಾರರಾಗಿ

ಇತ್ತೀಚಿನಸುದ್ದಿ

ಇನ್ನೊ ಓದಿ

ಭಾರಧ್ವಾಜಾಶ್ರಮ : ವೇದಾಧ್ಯಯನಕ್ಕೊಂದು ಗುರುಕುಲ..

By Balu Deraje  ಭಾರತದ ಪ್ರಾಚೀನ ಹಿಂದು ಧರ್ಮದ ಸಾಹಿತ್ಯ ಎಂದರೆ ವೇದಗಳು ಎಂದು ಪರಿಗಣಿಸಲಾಗಿದೆ. ಇದು ಸಂಸ್ಕೃತ ದಲ್ಲಿ ರಚಿಸಲ್ಪಟ್ಟಿದೆ. ಈ ವೇದಗಳನ್ನು ವ್ಯಾಸ ಮಹರ್ಷಿಗಳು ಪಠ್ಯ ರೂಪದಲ್ಲಿ 4 ವಿಭಾಗಗಳಾಗಿ ವಿಂಗಡಿಸಿ ಇವರ ನಾಲ್ಕು ಶಿಷ್ಯರಾದವರು 1: ಋಗ್ವೇದವನ್ನು ಪೈಲ ಮಹರ್ಷಿ, 2: ಯಜುರ್ವೇದ ವನ್ನು ವೈಶಂಪಾಯನ ಮಹರ್ಷಿ, 3:ಸಾಮವೇದ ವನ್ನು ಜೈಮಿನಿ ಮಹರ್ಷಿ, 4: ಅಥರ್ವಣ ವೇದವನ್ನು ಸುಮಂತ ಮಹರ್ಷಿ ಗಳು ಪ್ರಚಾರ ಮಾಡಿದರು. ನಂತರ ಗುರುಕುಲ ಪದ್ದತಿಯು ಆರಂಭಗೊಂಡಿತು ಎಂದು ಉಲ್ಲೇಖವಿದೆ.. ನಾಡಿನ...
suvarna vidhana soudha, belgaum, legislative building

ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಜುಲೈ 12 ರಂದು ಉಪಚುನಾವಣೆ

ಜುಲೈ 12ರಂದು ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಸಂಸದ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾದ ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. ಜೂನ್ 25 ರಂದು ಉಪಚುನಾವಣೆ ಅಧಿಸೂಚನೆಯನ್ನು ಹೊರಡಿಸಲಾಗುವುದು ಮತ್ತು ನಾಮಪತ್ರ ಸಲ್ಲಿಸಲು ಜುಲೈ 2 ಕೊನೆಯ ದಿನಾಂಕವಾಗಿದೆ. ಜುಲೈ 3 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಜುಲೈ 5 ಕೊನೆಯ ದಿನವಾಗಿದೆ. ಜುಲೈ 12 ರಂದು ಸಂಜೆ 5 ಗಂಟೆಗೆ ಮತ...
arrows, tendency, businesswoman

ಭಾರತದ ಜಿಡಿಪಿ ಶೇ. 7.2ರಷ್ಟು ಬೆಳೆಯಬಹುದು: ನಿರೀಕ್ಷೆ ಹೆಚ್ಚಿಸಿದ ಫಿಚ್ ರೇಟಿಂಗ್ಸ್

ಜಾಗತಿಕ ರೇಟಿಂಗ್ ಏಜೆನ್ಸಿಯಾದ ಫಿಚ್ (Fitch Ratings) ಪ್ರಕಾರ ಭಾರತದ ಆರ್ಥಿಕತೆ 2024-25ರ ಸಾಲಿನ ಹಣಕಾಸು ವರ್ಷದಲ್ಲಿ ಶೇ. 7.2ರಷ್ಟು ಹೆಚ್ಚಾಗಬಹುದು. ಈ ಹಿಂದೆ ಮಾಡಿದ ಅಂದಾಜಿನಲ್ಲಿ ಶೇ. 7ರಷ್ಟು ಜಿಡಿಪಿ ಹೆಚ್ಚಬಹುದು ಎಂದು ಅದು ಅಭಿಪ್ರಾಯಪಟ್ಟಿತ್ತು. ಈಗ 20 ಮೂಲಾಂಕಗಳಷ್ಟು ನಿರೀಕ್ಷೆ ಹೆಚ್ಚಿಸಿದೆ. ಹೂಡಿಕೆಗಳು ಹೆಚ್ಚುತ್ತಿರುವುದು, ಗ್ರಾಹಕರ ವಿಶ್ವಾಸ ಹೆಚ್ಚುತ್ತಿರುವುದು ಆರ್ಥಿಕ ಬೆಳವಣಿಗೆಗೆ ಪೂರಕವಾಗಿದೆ ಎಂಬುದು ಫಿಚ್ ರೇಟಿಂಗ್ಸ್​ನ ಅನಿಸಿಕೆಯಾಗಿದೆ.
cricket, sports, athlete

200 ಸಿಕ್ಸರ್‌ ಪೂರ್ಣಗೊಳಿಸಿ ವಿಶ್ವ ದಾಖಲೆ ಬರೆದ ರೋಹಿತ್‌ ಶರ್ಮಾ

ಭಾರತ ತಂಡದ ನಾಯಕ ರೋಹಿತ್‌ ಶರ್ಮಾ, ಆಸ್ಟ್ರೇಲಿಯಾ ವಿರುದ್ದದ ತಮ್ಮ ಕೊನೆಯ ಸೂಪರ್‌-8ರ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ನಡೆಸಿದರು. ಆ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 200 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದ್ದಾರೆ ಹಾಗೂ ವಿಶ್ವ ದಾಖಲೆಯನ್ನು ಬರೆದಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ ಸಿಡಿಸಿದ ಬ್ಯಾಟರ್ಸ್‌ 1. ರೋಹಿತ್‌ ಶರ್ಮಾ-157 ಪಂದ್ಯಗಳಿಂದ 203 ಸಿಕ್ಸರ್‌2. ಮಾರ್ಟಿನ್‌ ಗಪ್ಟಿಲ್‌-122 ಪಂದ್ಯಗಳಿಂದ 173 ಸಿಕ್ಸರ್‌3. ಜೋಸ್‌ ಬಟ್ಲರ್‌- 123 ಪಂದ್ಯಗಳಿಂದ 137 ಸಿಕ್ಸರ್‌4. ಗ್ಲೆನ್‌ ಮ್ಯಾಕ್ಸ್‌ವೆಲ್‌-113 ಪಂದ್ಯಗಳಿಂದ 133...

Get in Touch

ಧನಾತ್ಮಕ ಪತ್ರಿಕೋದ್ಯಮಕ್ಕೆ ಬೆಂಬಲ ನೀಡಿ

ಈಗಲೇ ನಮ್ಮ ವಾಟ್ಸಪ್ ಗ್ರೂಪ್ ಸೇರಿಕೊಳ್ಳಿ ಹಾಗೂ ನಮ್ಮ ಈ ಪ್ರಯತ್ನದಲ್ಲಿ ನೀವೂ ಭಾಗಿದಾರರಾಗಿ

Technology Partner

© Copyright 2024 – All Rights reserved

0
Would love your thoughts, please comment.x
()
x