Agriculture

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಸೌಲಭ್ಯಕ್ಕಾಗಿ ಅರ್ಜಿ ಅಹ್ವಾನ | ಇಲ್ಲಿದೆ ಮಾಹಿತಿ..

Share news

2023-24 ನೇ ಸಾಲಿಗಾಗಿ ತೋಟಗಾರಿಕೆ ಇಲಾಖೆಯಿಂದ ಹನಿ ನೀರಾವರಿ ಅಳವಡಿಸಿಕೊಳ್ಳಲು ಆಸಕ್ತ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಂದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಅಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಗರಿಷ್ಟ 2 ಹೆಕ್ಟೇರ್ ವರೆಗೆ ಶೇ.90 ರಷ್ಟು ಸಹಾಯಧನ ನೀಡಲಾಗುವುದು.

ಇತರೆ ರೈತರಿಗೆ 2 ಹೆಕ್ಟೇರ್ ವರೆಗೆ ಶೇ.75 ರಷ್ಟು ಸಹಾಯಧನ ನೀಡಲಾಗುವುದು. ತರಕಾರಿ ಹಾಗೂ ವಾಣಿಜ್ಯ ಹೂ ಬೆಳೆಗಳಿಗೆ ಗರಿಷ್ಠ 2 ಹೆಕ್ಟೇರ್ ಪ್ರದೇಶಕ್ಕೆ ಮಾತ್ರ ಸಹಾಯಧನ ನೀಡಲಾಗುವುದು.

ಗೃಹಲಕ್ಷ್ಮೀ ಯೋಜನೆಯ ನೋಂದಣಿ ತಾತ್ಕಾಲಿಕ ಸ್ಥಗಿತ

ಎಲ್ಲಾ ವರ್ಗದ ರೈತರಿಗೆ ಭಾರತ ಸರ್ಕಾರದ ಮಾರ್ಗಸೂಚಿಯನ್ವಯ 2 ಹೆಕ್ಟೇರ್ ಮೇಲ್ಪಟ್ಟು 5 ಹೆಕ್ಟೇರ್ ವರೆಗೂ ಶೇ.45 ರಷ್ಟು ಸಹಾಯಧನ ನೀಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ ರೈತರಾಗಿದ್ದಲ್ಲಿ ಕಂದಾಯ ಇಲಾಖೆಯಿಂದ ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸುವುದು ಕಡ್ಡಾಯವಾಗಿದೆ.

ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸುವ ಮೊದಲು, ತಾಲೂಕಾ ತೋಟಗಾರಿಕೆ ಕಛೇರಿಯಲ್ಲಿ ಹೆಸರು ನೊಂದಾಯಿಸಿ ಕಾರ್ಯದೇಶ ಪಡೆಯಬೇಕು. ಕಾರ್ಯದೇಶ ಪಡೆಯದೇ ಅಳವಡಿಸಿಕೊಂಡಲ್ಲಿ ಸಹಾಯಧನಕ್ಕೆ ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ದೇಶದಲ್ಲಿಯೇ ಮೊದಲ ‘ಭೂಗತ ವಿದ್ಯುತ್ ಟ್ರಾನ್ಸ್‌ಫಾರ್ಮರ್’ ಕೇಂದ್ರ ಸ್ಥಾಪನೆ


Share news

Related Articles

Leave a Reply

Your email address will not be published. Required fields are marked *

Back to top button