ದ್ವಿತೀಯ ಪಿಯುಸಿಯಲ್ಲಿ ಶೇಕಡಾ 80%ಕ್ಕಿಂತ ಹೆಚ್ಚಿನ ಅಂಕವನ್ನು ಪಡೆದಿರುವ ಹಾಗೂ ಮೂರು ವರ್ಷಗಳ ಪದವಿ ವ್ಯಾಸಂಗ ಮಾಡಲಿಚ್ಛಿಸುವ ವಿದ್ಯಾರ್ಥಿಗಳಿಂದ ಕೇಂದ್ರದ ಉನ್ನತ ಶಿಕ್ಷಣ ಇಲಾಖೆಯು ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಿದೆ.
“ಪ್ರಧಾನ ಮಂತ್ರಿ ಉಷಾ ವಿದ್ಯಾರ್ಥಿವೇತನ 2024”(PM Usha Scholarship 2024) ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಪದವಿ ವಿದ್ಯಾರ್ಥಿಗಳಿಗೆ ಕೇಂದ್ರ ಶಿಕ್ಷಣ ಇಲಾಖೆಯ ವತಿಯಿಂದ ವಿದ್ಯಾರ್ಥಿ ವೇತನ ಸಿಗಲಿದೆ.
ಈ ವಿದ್ಯಾರ್ಥಿ ವೇತನ ಪಡೆಯಲು ಯಾರು ಅರ್ಹರು
ಪಿಎಮ್ ಉಷಾ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 80% ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರಬೇಕು. ಅಲ್ಲದೆ ಮೂರು ವರ್ಷಗಳ ಪದವಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಿಗುವ ವಿದ್ಯಾರ್ಥಿ ವೇತನದ ಮೊತ್ತ
ಶಿಕ್ಷಣ ಪಡೆಯಲು ಇಂದಿನ ಕಾಲದಲ್ಲಿ ಎಷ್ಟು ಹಣವಿದ್ದರೂ ಸಾಲದು. ಬಡವರ ಮನೆಯ ಮಕ್ಕಳಿಗಂತೂ ಬಯಸಿದ ಕಾಲೇಜಿನಲ್ಲಿ ಅಂದುಕೊಂಡಂತೆ ಶಿಕ್ಷಣ ಪಡೆಯುವುದು ಕಷ್ಟಕರವಾಗಿದೆ. ಆದ್ದರಿಂದ ಕೇಂದ್ರ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯ ಮಾಡುವ ನಿಟ್ಟಿನಲ್ಲಿ ಈ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ. ಈ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪದವಿ ಶಿಕ್ಷಣದ ಮೊದಲನೇ ವರ್ಷ 12000ರೂ ಹಾಗೂ ಎರಡನೇ ಮತ್ತು ಕೊನೆಯ ವರ್ಷಗಳ ವಿದ್ಯಾರ್ಥಿಗಳಿಗೆ ತಲಾ 20000ರೂ ವಿದ್ಯಾರ್ಥಿ ವೇತನ ಸಿಗಲಿದೆ.
ಇದನ್ನೂ ಓದಿ: 1ನೇ ತರಗತಿ ಸೇರಲು ಗರಿಷ್ಠ ವಯೋಮಿತಿ 8 ವರ್ಷಕ್ಕೆ ಹೆಚ್ಚಳ
ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹ ದಾಖಲೆಗಳು
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ತರಗತಿಗಳ ಅಂಕಪಟ್ಟಿ
- ಪದವಿ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವುದಕ್ಕೆ ಸಂಬಂಧಿಸಿದಂತೆ ದಾಖಲೆ
- ವಿದ್ಯಾರ್ಥಿಯ ಭಾವಚಿತ್ರ
- ಮೊಬೈಲ್ ನಂಬರ್ (ಆಧಾರ್ ಲಿಂಕ್ಡ್)
ಅರ್ಜಿ ಸಲ್ಲಿಸಲು ಇಚ್ಛಿಸುವ ಅರ್ಹ ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯ ಜಾಲತಾಣ www.scholarship.gov.in ಮೂಲಕ ನ್ಯಾಶನಲ್ ಇ-ಸ್ಕಾಲರ್ಶಿಪ್ ಪೋರ್ಟಲ್ ಅಲ್ಲಿ ನೋಂದಣಿ ಮಾಡಿಕೊಂಡು 31.10.2024ರ ಒಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 080-23311330 ವನ್ನು ಸಂಪರ್ಕಿಸಬಹುದಾಗಿದೆ.
ಇದನ್ನೂ ಓದಿ: ಮಳೆಗಾಲದಲ್ಲಿ ವಿದ್ಯುತ್ ಬಗ್ಗೆ ಎಚ್ಚರವಿರಲಿ
Rajapur
BA 1st semester