ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಫೆಂಗಲ್ ಚಂಡಮಾರುತ ಭಾರಿ ಪರಿಣಾಮ ಬೀರುತ್ತಿದೆ. ಇಂದು ಕೂಡ ಕರಾವಳಿ ಭಾಗದಲ್ಲಿ ಸೈಕ್ಲೋನ್ ಪರಿಸ್ಥಿತಿ ಮುಂದುವರಿದಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರು ಹವಾಮಾನ ಕೇಂದ್ರದ ಇತ್ತೀಚಿನ ವರದಿ ಪ್ರಕಾರ, ಕೊಡಗಿನಲ್ಲೂ ಧಾರಾಕಾರ ಮಳೆಯಾಗಲಿದೆ.
ಡಿಸೆಂಬರ್ 3ರ ಮಳೆಯ ಮುನ್ಸೂಚನೆ ಇರುವ ಜಿಲ್ಲೆಗಳು
ತಮಿಳುನಾಡಿನ ಕರಾವಳಿಗೆ ಅಪ್ಪಳಿಸಿದ್ದ ಫೆಂಗಲ್ ಚಂಡಮಾರುತವು ಕರ್ನಾಟಕ ಕರಾವಳಿ ಪ್ರದೇಶಕ್ಕೂ ಸಾಗಿರುವ ಪರಿಣಾಮವಾಗಿ ಡಿಸೆಂಬರ್ 3ರ ಮಂಗಳವಾರ ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಕೊಡಗು ರಾಮನಗರ ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಅನೇಕ ಪ್ರದೇಶಗಳಲ್ಲಿ ಹಗುರದಿಂದ ಕೂಡಿ ಸಾಧಾರಣ ಮಳೆಯನ್ನು ನಿರೀಕ್ಷಿಸಲಾಗಿದೆ. ಮುಂದಿನ 5 ದಿನಗಳ ವರಿಗೆ ಇದೇ ರೀತಿಯ ಪರಿಸ್ಥಿತಿ ಇರಲಿದೆ ಎಂದು ಹವಾಮಾನ ಕೇಂದ್ರ ತನ್ನ ವರದಿಯಲ್ಲಿ ತಿಳಿಸಿದೆ.
ಇದನ್ನೂ ಓದಿ:ಡಿ.6ರಿಂದ ಕೈರಂಗಳದಲ್ಲಿ ರಾಜ್ಯಮಟ್ಟದ ಶಿಕ್ಷಣ ಉದ್ಯೋಗ ಕೃಷಿ ಮೇಳ – 2024
ಬೆಂಗಳೂರು ಹವಾಮಾನ ಕೇಂದ್ರದಲ್ಲಿ ಡಿಸೆಂಬರ್ 2ರ ಸೋಮವಾರ ಸಂಜೆಯವರಿಗೆ ದಾಖಲಾಗಿರುವ ವರದಿಯ ಪ್ರಕಾರ ಚಾಮರಾಜನಗರ ಜಿಲ್ಲೆಯಲ್ಲಿ ಗರಿಷ್ಠ ಮಳೆಯಾಗಿದೆ. ಇಲ್ಲಿ 5 ಸೆಂಟಿ ಮೀಟರ್ ಮಳೆಯಾಗಿದೆ.
ಇದನ್ನೂ ಓದಿ: ಡಿಸಂಬರ್ 10ರಿಂದ 15ರವರೆಗೆ ‘ಆಳ್ವಾಸ್ ವಿರಾಸತ್’ – 2024 | ಹಲವು ವಿಶೇಷತೆಗಳು…