ದ.ಕ. ಜಿಲ್ಲಾಧಿಕಾರಿ ಕಚೇರಿ ಕಟ್ಟಡ ಸಂಕೀರ್ಣದಲ್ಲಿ ಆರಂಭಿಸಲಾಗಿರುವ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಕಾರ್ಯಾಲಯವನ್ನು ಭಾರತ ಮಾತೆಯ ಭಾವಚಿತ್ರದ ಎದುರು ದೀಪ ಬೆಳಗಿಸಿ ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರು ಉದ್ಘಾಟಿಸಿದರು.
ಕ್ಯಾ. ಬ್ರಿಜೇಶ್ ಚೌಟ ಮಾತನಾಡಿ “ಹಿಂದುತ್ವದ ಧ್ವನಿಯಾಗಿ, ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ದುಡಿಯುತ್ತೇನೆ. ಎಲ್ಲರ ಸಹಕಾರದಿಂದ ಮುಂದುವರಿಯುತ್ತೇನೆ. ಈ ಕಚೇರಿಯು ಜಿಲ್ಲೆಯ ಜನರ ಸಮಸ್ಯೆಗಳಿಗೆ ಉತ್ತರ ನೀಡುವ ಕೇಂದ್ರವಾಗಲಿ. ಇಲ್ಲಿ ಸಮಾಜದ ಕಟ್ಟ ಕಡೆಯ ಜನರಿಗೆ ನ್ಯಾಯ ಒದಗಿಸುವ ಕೆಲಸ ಆಗಲಿ” ಎಂದರು.
ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ ಡಿ. ಕಾಮತ್, ಡಾ. ಭರತ್ ಶೆಟ್ಟಿ, ರಾಜೇಶ್ ನಾಯಕ್ ಉಳಿಪಾಡಿ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮೇಯರ್ ಸುಧೀರ್ ಶೆಟ್ಟಿ, ಉಪಮೇಯರ್ ಸುನಿತಾ, ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಕ್ಯಾ. ಗಣೇಶ್ ಕಾರ್ಣಿಕ್, ಕೆ. ಮುಂತಾದವರು ಉಪಸ್ಥಿತರಿದ್ದು ಶುಭ ಹಾರೈಸಿದರು.