ಕುಮಟಾ-ಶಿರಸಿ ರಸ್ತೆಯಲ್ಲಿ ಉನ್ನತೀಕರಣ ಕಾಮಗಾರಿ ಸಲುವಾಗಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುತ್ತದೆ. ಆದ್ದರಿಂದ ಪರ್ಯಾಯ ಮಾರ್ಗವನ್ನು ಬಳಕೆ ಮಾಡುವಂತೆ ಉತ್ತರ ಕನ್ನಡ ಜಿಲ್ಲಾ ಪೊಲೀಸರು ಮಾಹಿತಿ ನೀಡಿದ್ದಾರೆ.
ಕಾಮಗಾರಿಯನ್ನು ದಿನಾಂಕ 02-12-2024ರಿಂದ ಪ್ರಾರಂಭಿಸಲಿದೆ. ಸದರಿ ಕಾಮಗಾರಿಯು ನಿಗದಿತ ಸಮಯದೊಳಗೆ ಮುಕ್ತಾಯಗೊಳಸಬೇಕಾಗಿರುವುದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಲಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ: ಬಂತು ಸ್ಮಾರ್ಟ್ ಡಿಜಿಟಲ್ ಲಗೇಜ್ ಲಾಕರ್, ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ!
ಬದಲಿ ಮಾರ್ಗಗಳು
- ಕುಮಟಾ-ಶಿರಸಿ ಮೂಲಕ ಸಿದ್ದಾಪುರ ರಾಷ್ಟ್ರೀಯ ಹೆದ್ದಾರಿ 766-ಇ ಲಘು ವಾಹನಗಳು ಸಂಚರಿಸಬಹುದು.
- ಅಂಕೋಲಾ-ಶಿರಸಿ ಮೂಲಕ ಯಲ್ಲಾಪುರ ರಾಷ್ಟ್ರೀಯ ಹೆದ್ದಾರಿ 63 ಮತ್ತು ರಾಜ್ಯ ಹೆದ್ದಾರಿ-93 ಮಾರ್ಗವಾಗಿ ಎಲ್ಲಾ ವಿಧದ ವಾಹನಗಳು ಸಂಚರಿಸಬಹುದು.
- ಮಂಗಳೂರು-ಹೊನ್ನಾವರ-ಶಿರಸಿ ಮೂಲಕ ಸಿದ್ದಾಪುರ-ಮಾವಿನಗುಂಡಿ ಮಾರ್ಗವಾಗಿ ಎಲ್ಲಾ ವಿಧದ ವಾಹನಗಳು ಸಂಚರಿಸಬಹುದು
ಇದನ್ನೂ ಓದಿ: ಇಂದಿನಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ
ಕುಮಟಾ-ಶಿರಸಿ ಹೆದ್ದಾರಿ ಉತ್ತರ ಕರ್ನಾಟಕ ಮತ್ತು ಕರಾವಳಿ ನಡುವಿನ ಸಂಪರ್ಕ ಕೊಂಡಿಯಾಗಿದೆ. ಭಾರತ್ ಮಾಲಾ ಯೋಜನೆಯಡಿ ಈ ರಸ್ತೆಯನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ. ಬೇಸಿಗೆಯಲ್ಲಿ ಈ ರಸ್ತೆಯ ಕಾಮಗಾರಿ ಪೂರ್ಣಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಗುರಿ ಹೊಂದಿದೆ. ಆದ್ದರಿಂದ ವಾಹನ ಸಂಚಾರ ಬಂದ್ ಮಾಡಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ.