ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ 31-07-2024 ರಂದು ರಜೆ ಘೋಷಣೆ
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರರ ಮುನ್ಸೂಚನೆಯಂತ್ರ, ದಿನಾಂಕ : 31-07-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.
ತುರ್ತು ಕ್ರಮ :
1) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪರವಿ ಪೂರ್ವ 31-07-2024 ರಂದು ರಜೆ ಘೋಷಣೆ
2) ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗದುನಹರಿಸುವುದು.
3) ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತ ವಹಿಸುವುದು.
4) ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.
5) ಜಿಲ್ಲೆಯಲ್ಲಿ ವಿಭರೀತ್ರ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ ತೋಡುಗಳ ಮತ್ತು ವಿದ್ಯುತ್ ಕಂಬ/ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸುವುದು,
6) ತುರ್ತು ಪರಿಸ್ಥಿತಿಯಲ್ಲಿ ಕೂಡಲೇ ಸಂಬಂಧಪಟ್ಟ ಪಂಚಾಯತನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವುದು. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು.
ಇದನ್ನೂ ಓದಿ: ಮಳೆಗಾಲದಲ್ಲಿ ವಿದ್ಯುತ್ ಬಗ್ಗೆ ಎಚ್ಚರವಿರಲಿ