ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿಪ್ರಮಾಣದ ಮಳೆ, ಹಲವು ಕಡೆಗಳಲ್ಲಿ ಹನಿಗಳು ಉಂಟಾಗಿದೆ. ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾದರೆ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 24 ಸೆಂ.ಮೀ, ಕೊಲ್ಲೂರಲ್ಲಿ 19 ಸೆ.ಮೀ, ಕೊಟ್ಟಿಗೆಹಾರದಲ್ಲಿ 19 ಸೆಂ ಮೀ ಮಳೆಯಾಗಿದೆ.
ಮುಂದಿನ 24 ಗಂಟೆಯೊಳಗೆ ಬಂಗಾಳ ಉಪಸಾಗರದಲ್ಲಿ ವಾಯುಭಾರ ಕುಸಿತ ಆಗುವ ಹೆಚ್ಚಿನ ಸಾಧ್ಯತೆ ಇದೆ. ಇವುಗಳ ಪ್ರಭಾವದಿಂದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಜುಲೈ 18 ರಿಂದ ಜುಲೈ 22 ರವರೆಗೆ ವ್ಯಾಪಕವಾಗಿ ಮಳೆ ಇದೆ. ಕರಾವಳಿ ಕರ್ನಾಟಕ ಮತ್ತು ಪಕ್ಕದ ಪಶ್ಚಿಮ ಘಟ್ಟಗಳ ಜಿಲ್ಲೆಗಳಲ್ಲಿ ಬಲವಾದ ಗಾಳಿ ಒಮ್ಮುಖವಾಗಿದೆ. ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಗಾಳಿಯ ವೇಗವು (40-50 kmph) ತಲುಪುವ ಸಾಧ್ಯತೆಯಿದೆ ಹಾಗೊ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: ಮಳೆಗಾಲದಲ್ಲಿ ವಿದ್ಯುತ್ ಬಗ್ಗೆ ಎಚ್ಚರವಿರಲಿ
ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದ್ದು ಅಲ್ಲಲ್ಲಿ ಮನೆಗಳಿಗೆ ಹಾನಿ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪುತ್ತೂರು, ಕಡಬ, ಬಂಟ್ವಾಳ, ಸುಳ್ಯ, ಬೆಳ್ತಂಗಡಿ ತಾಲೂಕುಗಳ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕ್ರಮ ಕೈಗೊಂಡಿದೆ.
ರೆಡ್ ಅಲರ್ಟ್ ಎಲ್ಲೆಲ್ಲಿ ?
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನಲ್ಲಿ ಭಾರಿಯಿಂದ ಅತಿಭಾರಿ ಮಳೆಯಾಗಲಿದ್ದು, ಜುಲೈ 18 ಹಾಗೂ 19 ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 20 ಹಾಗೂ 21 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಯೆಲ್ಲೋ ಅಲರ್ಟ್ ಎಲ್ಲೆಲ್ಲಿ ?
ಬೀದರ್, ಕಲಬುರ್ಗಿ, ಯಾದಗಿರಿ, ಬೆಳಗಾವಿ ಹಾಗೂ ಹಾಸನದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಜುಲೈ 18 ಹಾಗೂ 19 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಳೆ ಅಬ್ಬರ: ಕೊಡಗಿನಲ್ಲಿ ಶಾಲಾ, ಕಾಲೇಜಿಗೆ ರಜೆ
ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದ್ದು, ಗುರುವಾರವೂ ಅಂಗನವಾಡಿ, ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಬುಧವಾರವೂ ದಿನವಿಡೀ ಎಡೆಬಿಡದೆ ಮಳೆ ಸುರಿದಿದೆ. ಮುಂದಿನ ಎರಡು ದಿನ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಿ ಎಂದು ಜಿಲ್ಲಾಧಿಕಾರಿ ವೆಂಟಕ್ ರಾಜಾ ಆದೇಶಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಜುಲೈ 18 ರಿಂದ 20 ರವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಸಿಎಸ್ ಪಾಟೀಲ್ ತಿಳಿಸಿದ್ದಾರೆ. ನಗರದಲ್ಲಿ ಇಂದೂ ಕೂಡಾ ಹಲವೆಡೆ ಮಳೆಯಾಗುತ್ತಿದೆ. ದಟ್ಟ ಮೋಡ ಕವಿದ ವಾತಾವರಣ ಕಳೆದ ಒಂದು ವಾರದಿಂದ ಮುಂದುವರಿದಿದೆ.
ಜಿಲ್ಲೆಯಲ್ಲಿ ಹರಿಯುವ ಎಲ್ಲಾ ನದಿಗಳು ಅಪಾಯದ ಮಟ್ಟವನ್ನು ತಲುಪಿದ್ದು ಯಾರೂ ನದಿಗಳ ಹತ್ತಿರ ಹೋಗಬೇಡಿ. ಅಲ್ಲದೆ ಸಮುದ್ರ ತೀರದಲ್ಲೂ ದೈತ್ಯ ಅಲೆಗಳ ಅಬ್ಬರ ಜೋರಾಗಿದ್ದು ಸರ್ಕಾರದ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಲು ವಿನಂತಿಸಿದೆ
ಇದನ್ನೂ ಓದಿ: ಮಳೆಗಾಲದಲ್ಲಿ ಕಾಡುವ ಶೀತ, ಕೆಮ್ಮು-ಕಫಕ್ಕೆ ಸರಳವಾದ ಮನೆ ಮದ್ದು
ಶರಾವತಿ, ತುಂಗಾ, ವರದಾ, ಕುಮದ್ವತಿ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಜನರಿಗೆ ಎಚ್ಚರಿಕೆಯಿಂದ ಇರುವಂತೆ ಮುನ್ಸೂಚನೆ ನೀಡಲಾಗಿದೆ. ಯಾವುದೇ ಅಪಾಯದ ಸ್ಥಿತಿ ಎದುರಾದರೂ ಸ್ಥಳೀಯಾಡಳಿತದ ಗಮನಕ್ಕೆ ತರಬಹುದಾಗಿದೆ. ಭದ್ರಾವತಿ ಮತ್ತು ಶಿವಮೊಗ್ಗ ತಾಲೂಕು ಸೇರಿದಂತೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ ಶಾಳೆ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.