ಅಂತಾರಾಷ್ಟ್ರೀಯ

200 ಕೋಟಿ ದಾಟಿದ ಭಾರತದ ಲಸಿಕಾ ಅಭಿಯಾನದ ಯಶಸ್ಸಿಗೆ ಮೋದಿಗೆ ಅಭಿನಂದನೆ ಸಲ್ಲಿಸಿದ ಬಿಲ್ ಗೇಟ್ಸ್

Share news

ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಅವರು ಕೋವಿಡ್ ವಿರುದ್ಧ ಭಾರತದಲ್ಲಿ ನಡೆಯುತ್ತಿರುವ ಲಸಿಕಾ ಅಭಿಯಾನ 200 ಕೋಟಿ ಗಡಿ ದಾಟಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ.

ಬಿಲ್ ಗೇಟ್ಸ್ ಅವರು ಮೇ ತಿಂಗಳಲ್ಲಿ ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯಲ್ಲಿ ಭಾರತದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರನ್ನು ಭೇಟಿಯಾದಾಗ ದೇಶದ ಲಸಿಕಾ ಅಭಿಯಾನವನ್ನು ಶ್ಲಾಘಿಸಿದ್ದರು. ಇಂದು “200 ಕೋಟಿ ಲಸಿಕೆಗಳನ್ನು ನೀಡುವ ಮೂಲಕ ಭಾರತ ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು. ಕೋವಿಡ್-19 ರ ಪರಿಣಾಮವನ್ನು ಕಡಿಮೆ ಮಾಡಲು, ಭಾರತೀಯ ಲಸಿಕೆ ತಯಾರಕರು ಮತ್ತು ಭಾರತ ಸರ್ಕಾರದೊಂದಿಗಿನ ನಿರಂತರ ಪಾಲುದಾರಿಕೆಗೆ ಕೃತಜ್ಞರಾಗಿದ್ದೇವೆ.” ಎಂದು ಹೇಳಿದ್ದಾರೆ.

ಭಾರತದ ಲಸಿಕಾ ಅಭಿಯಾನದ ಯಶಸ್ಸು ದೇಶದ ಜನರ ಆರೋಗ್ಯವನ್ನು ಕಾಪಾಡಲು ಮತ್ತು ಲಸಿಕೆ ತಯಾರಿಸುವಿಕೆಯಲ್ಲಿ ತಂತ್ರಜ್ಞಾನದ ಬಳಕೆಯು ಜಗತ್ತಿಗೆ ಅನೇಕ ಪಾಠಗಳನ್ನು ನೀಡುತ್ತದೆ,ಎಂದು ಬಿಲ್ ಗೇಟ್ಸ್ ಮೇ 29 ರಂದು ಹೇಳಿದ್ದರು. ಕಳೆದ ವರ್ಷ ಜನವರಿಯಲ್ಲಿ ಭಾರತವು ವಿಶ್ವದ ಅತಿದೊಡ್ಡ ಕೋವಿಡ್ ಲಸಿಕೆ ಅಭಿಯಾನವನ್ನು ಪ್ರಾರಂಭಿಸಿತು. ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ಅರ್ಹ ಫಲಾನುಭವಿಗಳಿಗೆ ಇದುವರೆಗೆ 200.59 ಕೋಟಿ ಡೋಸ್‌ಗಳನ್ನು ನೀಡಲಾಗಿದೆ. ಇದು ಭಾರತೀಯರಿಗೆ ಹೆಮ್ಮೆಯ ಸಂಗತಿ


Share news

Related Articles

Leave a Reply

Your email address will not be published. Required fields are marked *

Back to top button