Jobs

ಭಾರತೀಯ ನೌಕಾಪಡೆಯಲ್ಲಿ SSC ಎಕ್ಸಿಕ್ಯೂಟಿವ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸುವುದು ಹೇಗೆ ?

Share news

ಭಾರತೀಯ ನೌಕಾಪಡೆಯಲ್ಲಿ ಮಾಹಿತಿ ತಂತ್ರಜ್ಞಾನ ವಿಭಾಗದ ಶಾರ್ಟ್‌ ಸರ್ವೀಸ್ ಕಮಿಷನ್‌ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಈ ಹುದ್ದೆಗಳನ್ನು 2024 ರ ಜನವರಿಯಲ್ಲಿ ನೇಮಕ ಮಾಡಿಕೊಳ್ಳಲಿದ್ದು, ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ತಿಳಿಸಲಾಗಿದೆ.

ಭಾರತೀಯ ನೌಕಾಪಡೆಯ ಅಧಿಕೃತ ವೆಬ್‌ಸೈಟ್‌ joinindiannavy.gov.in ಗೆ ಭೇಟಿ ನೀಡಿ.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 20-08-2023

ನೇಮಕಾತಿ ಸಂಸ್ಥೆ / ಪ್ರಾಧಿಕಾರ : ಭಾರತೀಯ ನೌಕಾಪಡೆ
ಹುದ್ದೆಗಳ ಹೆಸರು : ಎಸ್ಎಸ್‌ಸಿ ಎಕ್ಸಿಕ್ಯೂಟಿವ್
ಹುದ್ದೆಗಳ ಸಂಖ್ಯೆ : 35

ಅರ್ಹತೆಗಳು :

  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅವಿವಾಹಿತರಾಗಿರಬೇಕು.
  • ಅಭ್ಯರ್ಥಿ ಜನವರಿ 02, 1999 ಮತ್ತು ಜುಲೈ 01, 2004 ರ ನಡುವೆ ಜನಿಸಿರಬೇಕು.
  • ಇಂಜಿನಿಯರಿಂಗ್‌ ಡಿಗ್ರಿ ಅನ್ನು ಶೇಕಡ.60 ಅಂಕಗಳೊಂದಿಗೆ ಪಾಸ್‌ ಮಾಡಿದ ಹಾಗೂ ಅಂತಿಮ ಬಿಇ ಪದವಿ ಓದುತ್ತಿರುವ ಅಭ್ಯರ್ಥಿಗಳು ಸಹ ಅರ್ಜಿ ಹಾಕಬಹುದು. ಎಂಎಸ್ಸಿ / ಎಂ.ಟೆಕ್ / ಎಂಸಿಎ ಪದವಿ ಪಡೆದವರು ಹುದ್ದೆಗಳಿಗೆ ಅನುಸಾರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಅಪ್ಲಿಕೇಶನ್ ಸಲ್ಲಿಸುವುದು ಹೇಗೆ?

  • ಭಾರತೀಯ ನೌಕಾಪಡೆಯ ಅಧಿಕೃತ ವೆಬ್‌ಸೈಟ್‌ joinindiannavy.gov.in ಗೆ ಭೇಟಿ ನೀಡಿ.
  • ಓಪನ್‌ ಆದ ಪೇಜ್‌ನಲ್ಲಿ ‘Executive Post’ ಟ್ಯಾಬ್ ಆಯ್ಕೆ ಮಾಡಿ.
  • ಹೊಸ ವೆಬ್‌ಪೇಜ್‌ ತೆರೆಯುತ್ತದೆ. ‘New User’ ಎಂಬಲ್ಲಿ ಕ್ಲಿಕ್ ಮಾಡಿ ರಿಜಿಸ್ಟ್ರರ್ ಮಾಡಿ.
  • ನಂತರ ಯೂಸರ್ ನೇಮ್, ಪಾಸ್‌ವರ್ಡ್‌ ನೀಡಿ ಲಾಗಿನ್‌ ಆಗುವ ಮೂಲಕ ಅಪ್ಲಿಕೇಶನ್ ಪ್ರಕ್ರಿಯೆ ಮುಗಿಸಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ ಅರ್ಜಿ ಪೂರ್ಣಗೊಳಿಸಿ.
  • ಮುಂದಿನ ರೆಫರೆನ್ಸ್‌ಗಾಗಿ ಅರ್ಜಿ ಪ್ರಿಂಟ್ ತೆಗೆದುಕೊಳ್ಳಿ.


ಪ್ರಮುಖ ದಿನಾಂಕಗಳು
ನೋಟಿಫಿಕೇಶನ್‌ ಬಿಡುಗಡೆ ದಿನಾಂಕ : 29-07-2023
ಅರ್ಜಿ ಸಲ್ಲಿಸಲು ಆನ್‌ಲೈನ್‌ ಲಿಂಕ್ ಬಿಡುಗಡೆ ದಿನಾಂಕ : 04-08-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 20-08-2023

ಆಯ್ಕೆ ಪ್ರಕ್ರಿಯೆ ಹೇಗೆ?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನಿಗದಿತ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್‌ ಲಿಸ್ಟ್‌ ಮಾಡಿ ಲಿಖಿತ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಳಿಗಾಗಿ :

Indian Navy SSC Executives Recruitment 2023 – Notification


Share news

Related Articles

Leave a Reply

Your email address will not be published. Required fields are marked *

Back to top button