All Kannada Newsರಾಷ್ಟ್ರೀಯ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ 2 ದಿನಗಳ ಗುಜರಾತ್ ಪ್ರವಾಸ ಇಂದಿನಿಂದ ಪ್ರಾರಂಭ

Share news

ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಗುರುವಾರ ತಮ್ಮ ತವರು ರಾಜ್ಯ ಗುಜರಾತ್‌ಗೆ ಆಗಮಿಸಲಿದ್ದು, ಸೂರತ್, ಭಾವನಗರ, ಅಹಮದಾಬಾದ್ ಮತ್ತು ಅಂಬಾಜಿಯಲ್ಲಿ ಸುಮಾರು ₹ 29,000 ಕೋಟಿ ಮೊತ್ತದ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಹಾಗೂ 36ನೇ ರಾಷ್ಟ್ರೀಯ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಅಹಮದಾಬಾದ್‌ನಲ್ಲಿ ಅವರು ಮೊದಲ ಹಂತದ ಮೆಟ್ರೋ ರೈಲು ಯೋಜನೆಯನ್ನು ಉದ್ಘಾಟಿಸಲಿದ್ದಾರೆ. ಸೂರತ್‌ನಲ್ಲಿ ನೀರು ಸರಬರಾಜು, ಒಳಚರಂಡಿ ಯೋಜನೆಗಳು, ಡೈಮಂಡ್ ರಿಸರ್ಚ್ ಮತ್ತು ಮರ್ಕೆಂಟೈಲ್ ಸಿಟಿ, ಜೀವವೈವಿಧ್ಯ ಉದ್ಯಾನ, ಇತ್ಯಾದಿಗಳಿಗೆ ಸಂಬಂಧಿಸಿದಂತೆ ಸೂರತ್‌ನಲ್ಲಿ ₹3,400 ಕೋಟಿಗೂ ಹೆಚ್ಚು ವೆಚ್ಚದ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಲಿದ್ದಾರೆ. ಸೂರತ್‌ನ ಮಕ್ಕಳ ವಿಜ್ಞಾನ ಕೇಂದ್ರದಲ್ಲಿ ಖೋಜ್ ಮ್ಯೂಸಿಯಂ ಅನ್ನು ಮೋದಿ ಉದ್ಘಾಟಿಸಲಿದ್ದಾರೆ.

ಪ್ರಧಾನಿ ಮೋದಿ ಭಾವನಗರದಲ್ಲಿ ಅವರು ₹4,000 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಿರುವ ಬ್ರೌನ್‌ಫೀಲ್ಡ್ ಬಂದರಿನ ವಿಶ್ವದ ಮೊದಲ ಸಿಎನ್‌ಜಿ ಟರ್ಮಿನಲ್‌ಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಅಹಮದಾಬಾದ್‌ನಲ್ಲಿ ನವರಾತ್ರಿ ಉತ್ಸವದಲ್ಲಿ ಪಾಲ್ಗೊಳ್ಳಲಿರುವ ಮೋದಿ, ಶುಕ್ರವಾರ ಗಾಂಧಿನಗರದಲ್ಲಿ ಗಾಂಧಿನಗರ-ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಲಿದ್ದಾರೆ. ಅವರು ಅಹಮದಾಬಾದ್‌ನ ಕಲುಪುರ್ ರೈಲು ನಿಲ್ದಾಣದಿಂದ ರೈಲಿನಲ್ಲಿ ಪ್ರಯಾಣಿಸಲಿದ್ದಾರೆ. ಹೀಗೆ ಅನೇಕ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.


Share news

Related Articles

Leave a Reply

Your email address will not be published. Required fields are marked *

Back to top button