All Kannada Newsರಾಜ್ಯ

ಸರ್ಕಾರಿ ಪ್ರೌಢಶಾಲೆಗಳಿಗೆ 2,500 ಶಿಕ್ಷಕರ ನೇಮಕಾತಿ

Share news

ಕರ್ನಾಟಕ ರಾಜ್ಯ ಸರ್ಕಾರಿ ಪ್ರೌಢಶಾಲೆಯಲ್ಲಿನ ಶಿಕ್ಷಕರ ಕೊರತೆ ನೀಗಿಸುವುದಕ್ಕಾಗಿ 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಅದರಲ್ಲಿ 2,200 ಸಹ ಶಿಕ್ಷಕರು, 200 ದೈಹಿಕ ಶಿಕ್ಷಣ ಶಿಕ್ಷಕರು ಮತ್ತು 100 ವಿಶೇಷ ಶಿಕ್ಷಕರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ.ನಾಗೇಶ್‌ ಅವರು ತಿಳಿಸಿದ್ದಾರೆ.

ಶಿಕ್ಷಣ ಇಲಾಖೆ ಪ್ರಕಾರ, ರಾಜ್ಯದಲ್ಲಿ 2500 ಪ್ರೌಢ ಶಾಲಾ ಶಿಕ್ಷಕರ ನೇಮಕಾತಿಗೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆ ಪ್ರಸ್ತಾವನೆಗ ಒಪ್ಪಿಗೆ ಸಿಕ್ಕಿದೆ. ಇದರಿಂದ ಶಿಕ್ಷಣ ಇಲಾಖೆಯು ಶಿಕ್ಷಕರ ನೇಮಕಾತಿಗೆ ಸೂಕ್ತ ಅಧಿಸೂಚನೆ ಸಿದ್ಧಪಡಿಸಿ ಪ್ರಕಟಿಸಬೇಕಿದೆ. ಪ್ರಸ್ತುತ 15 ಸಾವಿರ ಪದವೀಧರ ಶಿಕ್ಷಕರ ನೇಮಕ (6ರಿಂದ 8ನೇ ತರಗತಿ) ಪ್ರಕ್ರಿಯೆ ಪ್ರಗತಿಯಲ್ಲಿದೆ.

ಏಳೆಂಟು ವರ್ಷಗಳ ಬಳಿಕ ಇದೀಗ ಕಾಯುತ್ತಿದ್ದ ಅನೇಕ ಆಕಾಂಕ್ಷಿಗಳಿಗೆ ಒಳ್ಳೆಯ ಸುದ್ದಿಯನ್ನು ಶಿಕ್ಷಣ ಇಲಾಖೆ ನೀಡಿದೆ. 2014-15ರ ನಂತರ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿ ನಡೆದಿರಲಿಲ್ಲ ಇದೀಗ ಮತ್ತೆ ನೇಮಕಾತಿ ನಡೆಯಲಿದೆ. ಸದ್ಯ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ 6 ಸಾವಿರಕ್ಕೂ ಹೆಚ್ಚಿನ ಅತಿಥಿ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ನೇಮಕಾತಿ ಬಳಿಕ ಪ್ರೌಢ ಶಾಲೆಗಳಿಗೆ ಅನೇಕ ನೂತನ ಶಿಕ್ಷಕರು ನಿರ್ವಹಿಸಲಿದ್ದಾರೆ.


Share news

Related Articles

Leave a Reply

Your email address will not be published. Required fields are marked *

Back to top button