All Kannada Newsರಾಷ್ಟ್ರೀಯ

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ 1,800 ಕೋಟಿ ಅಂದಾಜು ವೆಚ್ಚ

Share news

ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯವಾದ ರಾಮ ಮಂದಿರ ನಿರ್ಮಾಣಕ್ಕೆ ಸುಮಾರು 1,800 ಕೋಟಿ ರೂ. ವೆಚ್ಚವಾಗುವ ಸಾಧ್ಯತೆಯಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಭಾನುವಾರ ನಡೆದ ಸಭೆಯ ಸುದ್ದಿಗಾರರಿಗೆ ತಿಳಿಸಿದ್ದಾರೆ. ಹಲವಾರು ಪರಿಷ್ಕರಣೆಗಳ ನಂತರ ನಾವು ಈ ಮೊತ್ತವನ್ನು ಅಂದಾಜಿಸಿದ್ದೇವೆ. ಈ ಮೊತ್ತವು ಕೂಡ ಮತ್ತೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಚಂಪತ್ ರೈ ಹೇಳಿದ್ದಾರೆ.

ರಾಮಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದೇವಸ್ಥಾನದ ಟ್ರಸ್ಟ್‌ನ 15 ಸದಸ್ಯರ ಪೈಕಿ 14 ಮಂದಿ ಭಾಗವಹಿಸಿದ್ದರು. ಈ ವೇಳೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಯಮಗಳು ಮತ್ತು ನಿಬಂಧನೆಗಳನ್ನು ಅಂತಿಮಗೊಳಿಸಲಾಗಿದೆ.ಮಂದಿರದ ನಿರ್ಮಾಣವು 2023 ರ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ರೈ ತಿಳಿಸಿದರು.

ಭವ್ಯ ರಾಮಮಂದಿರ ನಿರ್ಮಾಣ ಕಾರ್ಯ ಈಗಾಗಲೇ ಅರ್ಧದಷ್ಟು ಮುಗಿದು ಮುಂದಿನ ಹಂತಗಳು ನಡೆಯುತ್ತಿದೆ. ಅದಷ್ಟು ಶೀಘ್ರದಲ್ಲೇ ಪ್ರತಿಯೊಬ್ಬ ಹಿಂದೂವಿನ ಕನಸದ ರಾಮ ಮಂದಿರರದ ವೈಭವು ಮತ್ತೆ ಮರುಕಳಿಸಲು ಸಿದ್ಧವಾಗುತ್ತಿದ್ದು, ಯೋಗಿ ಆದಿತ್ಯನಾಥ್ ಅವರ ನೇತೃತ್ವದಲ್ಲಿ ನಿರಂತರವಾಗಿ ಮಂದಿರ ರೂಪ ಪಡೆಯುತ್ತಿದೆ. ಮುಂದಿನ ದಿನಗಳಲ್ಲಿ ಅಯೋಧ್ಯೆಯಲ್ಲಿ ರಾಮ ರಾಜ್ಯವು ಉದಯಿಸಲು ಸಿದ್ಧವಾಗುತ್ತಿದೆ.


Share news

Related Articles

Leave a Reply

Your email address will not be published. Required fields are marked *

Back to top button