ರಾಜ್ಯದ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸುವ ಉದ್ದೇಶದ ಮೊದಲ ಹೆಜ್ಜೆಯಾಗಿ ಜುಲೈ 22ರಿಂದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಎಲ್ಕೆಜಿ, ಯುಕೆಜಿ) ತರಗತಿಗಳನ್ನು ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಅಂಗನವಾಡಿ ಮಕ್ಕಳಿಗೆ ಗುಣಮಟ್ಟದ ಆಹಾರ ಈಗಾಗಲೇ ಇಲಾಖೆಯೇ ಪೂರೈಸುತ್ತಿದ್ದು ಇದರ ಜೊತೆಗೆ ಪುಸ್ತಕ, ಬ್ಯಾಗ್, ಸಮವಸ್ತ್ರಗಳನ್ನೂ ವಿತರಿಸಲಾಗುವುದು ಎಂದು ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ” ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕದ ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ ಇದೇ 22 ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಎಲ್ಕೆಜಿ, ಯುಕೆಜಿ) ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಗುವುದು ” ಹೇಳಿದರು.
ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಲು ರಾಜ್ಯ ಸರ್ಕಾರ ಡೇಟ್ ಫಿಕ್ಸ್ ಮಾಡಿದೆ. ಕರ್ನಾಟಕದ ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರವು
ಜುಲೈ 22 ರಿಂದ ಅಂಗನವಾಡಿಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸುತ್ತಿದೆ. ಆಗಮಿಸುವ ಮಕ್ಕಳಿಗೆ ಬ್ಯಾಗ್, ಪುಸ್ತಕ ಹಾಗೂ ಸಮವಸ್ತ್ರ ಸೌಲಭ್ಯ ನೀಡಲಿದೆ.
ಅಂಗನವಾಡಿ ಎಂಬುದು ಹಳೆಯ ಪರಿಕಲ್ಪನೆಯಾಗಿದ್ದು ಅದನ್ನು ಮಾಂಟೆಸ್ಸರಿ ಪರಿಕಲ್ಪನೆಗೆ ಬದಲಾಯಿಸಲಾಗುತ್ತದೆ.
ಮಾಂಟೆಸ್ಸರಿಗಳಲ್ಲಿ ಇಂಗ್ಲಿಷ್ ಭಾಷೆ ಜತೆ ಮಕ್ಕಳ ಶಿಕ್ಷಣಕ್ಕೂ ಆದ್ಯತೆ ನೀಡಲಾಗುತ್ತದೆ. ಪೌಷ್ಟಿಕಾಂಶದ ಜತೆ ಶೂ, ಪುಸ್ತಕ, ಶಾಲಾ ಬ್ಯಾಗ್‌ಗಳನ್ನು ನೀಡಲಾಗುತ್ತದೆ. ಖಾಸಗಿ ಶಾಲೆಗಳಲ್ಲಿನ ಎಲ್‌ಕೆಜಿ, ಯುಕೆಜಿಯಂತೆ ಶಿಕ್ಷಣ ಸಿಗಲಿದೆ. ಮಗುವಿಗೆ 6 ವರ್ಷ ತುಂಬಿದಾಗ ಟಿಸಿ ನೀಡುವ ಪದ್ಧತಿ ಆರಂಭಗೊಳ್ಳಲಿದೆ