ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರ ಮನವಿಗೆ ಸ್ಪಂದಿಸಿದ ನೈರುತ್ಯ ರೈಲ್ವೆ ಮಂಗಳೂರು ಬೆಂಗಳೂರು ಸಂಪರ್ಕಿಸುವ ಎರಡು ಮುಖ್ಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಗುಡ್ಡ ಕುಸಿತದಿಂದಾಗಿ ಸಂಚಾರದಲ್ಲಿ ಆಡಚಣೆಯದ ಹಿನ್ನೆಲೆಯಲ್ಲಿ ಎರಡು ಹೆಚ್ಚುವರಿ ವಿಶೇಷ ರೈಲು ಸಂಚಾರ ಆರಂಭಿಸಲು ರೈಲ್ವೆ ನೈರುತ್ಯ ಆದೇಶ ನೀಡಿದೆ.
ರೈಲು ವೇಳಾಪಟ್ಟಿ
1. 06547 ಸಂಖ್ಯೆಯ ರೈಲು ಇಂದು (ಶುಕ್ರವಾರ) ಬೆಂಗಳೂರಿನಿಂದ ರಾತ್ರಿ 11 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 11:40 ಕ್ಕೆ ಮಂಗಳೂರು ತಲುಪುತ್ತದೆ.
2. 06549 ಸಂಖ್ಯೆಯ ರೈಲು ಇದೇ 21 ಮತ್ತು 22ರಂದು ಯಶವಂತಪುರರಿಂದ ಮಂಗಳೂರು ಜಂಕ್ಷನ್‌ಗೆ ಹೊರಡಲಿದ್ದು, 06550 ಸಂಖ್ಯೆಯ ರೈಲು 21 ಮತ್ತು 22ರಂದು ಮಂಗಳೂರು ಜಂಕ್ಷನ್‌ನಿಂದ ಯಶವಂತಪುರಕ್ಕೆ ಹೊರಡಲಿದೆ.
ತಲಾ ಎರಡು ಗ್ಲೀಪರ್ ಕೋಚ್‌ಗಳು ಸೇರಿದಂತೆ ಈ ಎಲ್ಲ ರೈಲುಗಳಲ್ಲಿ ಒಟ್ಟು 18 ಕೋಚ್‌ಗಳು ಇರುತ್ತವೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.