ರಾಷ್ಟ್ರೀಯ

ಪ್ರಧಾನಿ ಮೋದಿ ಅನಾವರಣಗೊಳಿಸಲಿರುವ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಕುರಿತು 10 ಸಂಗತಿಗಳು

Share news

ಉತ್ತರ ಪ್ರದೇಶದ ಜಲೌನ್ ಜಿಲ್ಲೆಯಲ್ಲಿ 296 ಕಿಮೀ ಉದ್ದದ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇಯನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಈ ಯೋಜನೆಯು “ಸ್ಥಳೀಯ ಆರ್ಥಿಕತೆ ಮತ್ತು ಸಂಪರ್ಕ ಸೇತುವಾಗಿ ಕಾರ್ಯ ನಿರ್ವಹಿಸಲಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ವಿಶೇಷತೆಗಳು

1.ಉತ್ತರ ಪ್ರದೇಶ ಎಕ್ಸ್‌ಪ್ರೆಸ್‌ವೇಸ್ ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಅಥಾರಿಟಿ (ಯುಪಿಇಐಡಿಎ) ಅಡಿಯಲ್ಲಿ ಸುಮಾರು ₹ 14,850 ಕೋಟಿ ವೆಚ್ಚದಲ್ಲಿ 296-ಕಿಮೀ ನಾಲ್ಕು-ಪಥದ ಎಕ್ಸ್‌ಪ್ರೆಸ್‌ವೇ ನಿರ್ಮಿಸಲಾಗಿದೆ.

2. ನಾಲ್ಕು ಲೇನ್‌ಗಳಿಂದ, ಎಕ್ಸ್‌ಪ್ರೆಸ್‌ವೇ ಮುಂದೆ ಆರು ಲೇನ್‌ಗಳಿಗೆ ವಿಸ್ತಾರವಾಗಲಿದೆ.

3. ಎಕ್ಸ್‌ಪ್ರೆಸ್‌ವೇ ಮುಖ್ಯವಾಗಿ ಕೈಗಾರಿಕಾ ಅಭಿವೃದ್ಧಿ ಹಾಗೂ ಸಂಪರ್ಕ ಸೇತುವಾಗಿ ಪ್ರಮುಖ ಪಾತ್ರ ವಹಿಸಲಿದೆ. ಮುಂದೆ ಸ್ಥಳೀಯ ಜನರಿಗೂ ಸಾವಿರಾರು ಉದ್ಯೋಗಗಳು ಸೃಷ್ಟಿಯಾಗಲಿದೆ.

4. ಚಿತ್ರಕೂಟ್ ಜಿಲ್ಲೆಯ ಭಾರತ್‌ಕೂಪ್ ಬಳಿಯ ಗೊಂಡಾ ಹಳ್ಳಿಯಲ್ಲಿ NH-35 ರಿಂದ ಇಟಾವಾ ಜಿಲ್ಲೆಯ ಕುದುರೆಲ್ ಗ್ರಾಮದವರೆಗೆ ವಿಸ್ತಾರವಾಗಿದ್ದು, ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯೊಂದಿಗೆ ವಿಲೀನಗೊಳ್ಳುತ್ತದೆ.

5.ಎಕ್ಸ್‌ಪ್ರೆಸ್‌ವೇ ಚಿತ್ರಕೂಟ, ಬಂದಾ, ಮಹೋಬ, ಹಮೀರ್‌ಪುರ್, ಜಲೌನ್, ಔರೈಯಾ ಮತ್ತು ಇಟಾವಾ ಏಳು ಜಿಲ್ಲೆಗಳ ಮೂಲಕ ಹಾದುಹೋಗುತ್ತದೆ.

6. ಎಕ್ಸ್‌ಪ್ರೆಸ್‌ವೇಯ ಶಂಕುಸ್ಥಾಪನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 2020 ರಲ್ಲಿ ಮಾಡಿದ್ದರು, 28 ತಿಂಗಳೊಳಗೆ ಪೂರ್ಣಗೊಳಿಸಲಾಗಿದೆ.

7. ಬಂದಾ ಮತ್ತು ಜಲೌನ್ ಜಿಲ್ಲೆಗಳಲ್ಲಿ ಕೈಗಾರಿಕಾ ಕಾರಿಡಾರ್ ರಚನೆಯ ಕೆಲಸ ಎಕ್ಸ್‌ಪ್ರೆಸ್‌ವೇ ಪಕ್ಕದಲ್ಲಿ ಈಗಾಗಲೇ ಪ್ರಾರಂಭವಾಗಿದೆ.

8. ಪ್ರಧಾನಿ ಮೋದಿಯವರ ಪ್ರಕಾರ, ಎಕ್ಸ್‌ಪ್ರೆಸ್‌ವೇಯಿಂದಾಗಿ ಸ್ಥಳೀಯ ಆರ್ಥಿಕತೆಯು ಹೆಚ್ಚಿನ ಲಾಭವನ್ನು ಪಡೆಯುತ್ತದೆ. “ಈ ಪ್ರದೇಶದಲ್ಲಿ ಉತ್ತಮ ಕೈಗಾರಿಕಾ ಅಭಿವೃದ್ಧಿಯಾಗಲಿದೆ ಮತ್ತು ಇದು ಸ್ಥಳೀಯ ಯುವಕರಿಗೆ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸಲಿದೆ.

9. ಪ್ರಧಾನಮಂತ್ರಿಗಳ ಕಛೇರಿ (PMO) ಪ್ರಕಾರ, ದೇಶಾದ್ಯಂತ ಸಂಪರ್ಕವನ್ನು ಹೆಚ್ಚಿಸಲು ಸರ್ಕಾರವು ಬದ್ಧವಾಗಿದೆ.

10.ಕಳೆದ 7 ವರ್ಷಗಳಲ್ಲಿ ಭಾರತದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಉದ್ದವು 91,287 ಕಿ.ಮೀಗಳಿಂದ (ಏಪ್ರಿಲ್ 2014 ಪ್ರಕಾರ) ಸುಮಾರು 1,41,000 ಕಿ.ಮೀಗೆ (31 ಡಿಸೆಂಬರ್ 2021 ಪ್ರಕಾರ) ಒಟ್ಟು ಶೇ. 50ಕ್ಕಿಂತ ಹೆಚ್ಚಾಗಿದೆ. 2020-21ರಲ್ಲಿ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣದ ವೇಗವು ದಿನಕ್ಕೆ 12 ಕಿಮೀಯಿಂದ ದಿನಕ್ಕೆ 37 ಕಿ.ಮೀಗೆ ಏರಿಕೆಯಾಗಿದೆ. ಇಂದು ಹೆದ್ದಾರಿ ನಿರ್ಮಾಣ ಮತ್ತಷ್ಟು ವೇಗ ಪಡೆದು ದೇಶದಾದ್ಯಂತ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಸಾಗುತ್ತಿದೆ.

ವಿಶಿಷ್ಟವಾದ 296 ಕಿಮೀ ಉದ್ದದ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಸಂಪರ್ಕ ಸಾಧಿಸುವ ದೃಷ್ಟಿಯಿಂದ ಹಾಗೂ ಅಭಿವೃದ್ಧಿಯ , ಉದ್ಯೋಗ ಅವಕಾಶ ಕಲ್ಪಿಸುವ ಮೂಲಕ ಇನ್ನಷ್ಟು ಜನರಿಗೆ ಸಹಾಯವಾಗಲಿದೆ.


Share news

Related Articles

Leave a Reply

Your email address will not be published. Required fields are marked *

Back to top button