ರಾಷ್ಟ್ರೀಯ

70 ವರ್ಷಗಳಿಂದ ಬೆಳಕು ಕಾಣದ ಅಜ್ಜಿಗೆ ಮೊದಲ ಬಾರಿಗೆ ವಿದ್ಯುತ್‌ ಕಲ್ಪಿಸಿದ ಐಪಿಎಸ್‌ ಅಧಿಕಾರಿ

Share news

ಉತ್ತರ ಪ್ರದೇಶದಲ್ಲಿ ಐಪಿಎಸ್‌ ಅಧಿಕಾರಿ ಅನುಕೃತಿ ಶರ್ಮ, ಬುಲಂದ್‌ಶೇರ್‌ನಲ್ಲಿ ದಶಕಗಳಿಂದ ವಿದ್ಯುತ್‌ ಸಂಪರ್ಕದಿಂದ ವಂಚಿತರಾಗಿ ಕತ್ತಲಲ್ಲೇ ದಿನ ದೂಡುತ್ತಿದ್ದ 70 ವರ್ಷದ ನೂರ್‌ ಜಹಾನ್‌ ಕುಟುಂಬಕ್ಕೆ ವಿದ್ಯುತ್‌ ಸಂಪರ್ಕ ಕಲ್ಪಿಸಿಕೊಡುವ ಮೂಲಕ ಅಧ್ಬುತ ಕೆಲಸ ಮಾಡಿದ್ದಾರೆ.

ತೀರಾ ಬಡ ಕುಟುಂಬವಾಗಿರುವ ನೂರ್‌ಜಹಾನ್‌ ತಮ್ಮ ಮನೆಯಲ್ಲಿ ಏಕಾಂಗಿಯಾಗಿ ವಾಸ ಮಾಡುತ್ತಿದ್ದರು. ಮನೆಗೆ ವಿದ್ಯುತ್‌ ಸಂಪರ್ಕ ನೀಡುವಂತೆ ಪೊಲೀಸ್‌ ಠಾಣೆಗೆ ಮನವಿ ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿದ ಪೊಲೀಸ್‌ ಇಲಾಖೆ, ತಮ್ಮದೇ ಫಂಡ್‌ನಲ್ಲಿ ಆಕೆಯ ಮನೆಗೆ ಫ್ಯಾನ್‌ ಹಾಗೂ ಬಲ್ಬ್‌ ಜೊತೆಗೆ ವಿದ್ಯುತ್‌ ಸಂಪರ್ಕ ನೀಡಿದ್ದಾರೆ.


Share news

Related Articles

Leave a Reply

Your email address will not be published. Required fields are marked *

Back to top button