ರಾಷ್ಟ್ರೀಯ

ಭಾರತದ ರಾಷ್ಟ್ರಪತಿಯಾಗಿ ಆಯ್ಕೆಗೊಂಡ ಮೊದಲ ಆದಿವಾಸಿ ಮಹಿಳೆ ದ್ರೌಪದಿ ಮುರ್ಮು

Share news

ಭಾರತದ 15ನೇ ರಾಷ್ಟ್ರಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಯಶವಂತ್ ಸಿನ್ಹ 2,61,062 ಮತಗಳನ್ನು ಪಡೆದಿದ್ದು, ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು 5,77,777 ಮತಗಳನ್ನು ಪಡೆದು ಭರ್ಜರಿ ಗೆಲುವು ಸಾಧಿಸಿದ್ದಾರೆ. ದ್ರೌಪದಿ ಮುರ್ಮು ಭಾರತದ ಅತ್ಯುನ್ನತವಾದ ಸ್ಥಾನಕ್ಕೆ ಏರುತ್ತಿರುವ ಮೊದಲ ಆದಿವಾಸಿ ಮಹಿಳೆ ಹಾಗೂ ದೇಶದ ಎರಡನೇ ಮಹಿಳಾ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರೆ.

ಪ್ರಧಾನಿ ನರೇಂದ್ರ ಮೋದಿಯವರು ದ್ರೌಪದಿ ಮುರ್ಮು ಅವರ ನಿವಾಸಕ್ಕೆ ತೆರಳಿ ಅಭಿನಂದನೆಗಳನ್ನು ಸಲ್ಲಿಸಿದ್ದು, ಬುಡಕಟ್ಟು ಜನಾಂಗದ ಜನರು ಹಾಗೂ ದೇಶವೇ ಸಂಭ್ರಮಾಚರಣೆ ಮಾಡುತ್ತಿದೆ. ಭಾರತದ 75 ವರ್ಷಗಳ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ರಾಷ್ಟ್ರಪತಿ ಆಗುತ್ತಿರುವುದು ನಿಜಕ್ಕೂ ಸೌಭಾಗ್ಯದ ಸಂಗತಿ.

ದ್ರೌಪದಿ ಮುರ್ಮು ಯಾರು ?

ದ್ರೌಪದಿ ಮುರ್ಮು ಅವರು 1958 ಜೂನ್ 20 ಒಡಿಶಾ ರಾಜ್ಯದ ಮಯೂರ್ ಭಂಜ್ ಜಿಲ್ಲೆಯ ಬೈದಪೋಸಿ ಗ್ರಾಮದ ಸಂತಾಲಿ ಬುಡಕಟ್ಟು ಕುಟುಂಬದಲ್ಲಿ ಜನಿಸಿದರು.

ತಂದೆ ಮತ್ತು ಅಜ್ಜ ಪಂಚಾಯಾತ್ ರಾಜ್‌ ಯೋಜನೆಯಡಿಯಲ್ಲಿ ಗ್ರಾಮದ ಮುಖ್ಯಸ್ಥರಾಗಿದ್ದರು.

ಭುವನೇಶ್ವರದ ರಮಾದೇವಿ ಮಹಿಳಾ ಕಾಲೇಜಿನಲ್ಲಿ ವ್ಯಾಸಂಗ ಮಾಡಿರುವ ಅವರು ಬಿಎ ಪದವಿ ಪಡೆದಿದ್ದಾರೆ.

ಪದವಿ ನಂತರ ಸಹಾಯಕ ಪ್ರೊಫೆಸರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.

ಒಡಿಶಾ ರಾಜ್ಯದ ನೀರಾವರಿ ಇಲಾಖೆಯಲ್ಲಿ ಕಿರಿಯ ಸಹಾಯಕಿಯಾಗಿಯೂ ಸೇವೆ ಸಲ್ಲಿಸಿದ್ದಾರೆ

ಒಡಿಶಾದ ರಾಯರಂಗಪುರದಿಂದ 2000 ಮತ್ತು 2009 ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು

ಐದು ವರ್ಷಗಳ ಹಿಂದೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ರಾಷ್ಟ್ರಪತಿ ಭವನವನ್ನು ತೊರೆಯಲು ನಿರ್ಧರಿಸಿದಾಗ ದ್ರೌಪದಿ ಮುರ್ಮು ಅವರನ್ನು ಮೊದಲ ಸ್ಪರ್ಧಿಯಾಗಿ ಪರಿಗಣಿಸಲಾಗಿತ್ತು.

ಭಾರತೀಯ ಜನಾತ ಪಾರ್ಟಿಯ ಪರಿಶಿಷ್ಟ ಪಂಗಡಗಳ ಮೋರ್ಚಾದ ರಾಷ್ಟ್ರೀಯ ಉಪಾಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ್ದರು.

2000 ರಲ್ಲಿ ಶಾಸಕಿಯಾಗಿ ಆಯ್ಕೆಯಾದ ಸಮಯದಲ್ಲಿ ಬಿಜೆಪಿ-ಬಿಜೆಡಿ ಸಮ್ಮಿಶ್ರ ಸರ್ಕಾರದಲ್ಲಿ ವಾಣಿಜ್ಯ, ಸಾರಿಗೆ, ಮೀನುಗಾರಿಕೆ, ಪಶುಸಂಗೋಪನೆ ಖಾತೆಗಳನ್ನು ಹೊಂದಿದ್ದರು.

2015 ದ್ರೌಪದಿ ಮುರ್ಮು ಅವರು ಜಾರ್ಖಂಡ್‌ನ ಮೊದಲ ಮಹಿಳಾ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇಂದು ಮೊದಲ ಆದಿವಾಸಿ ಮಹಿಳೆ ರಾಷ್ಟ್ರಪತಿಯಾಗಿ ಆಯ್ಕೆ ಆಗಿದ್ದಾರೆ.

ಬುಡಕಟ್ಟು ಜನಾಂಗಕ್ಕೆ ದೇಶದ ಅತ್ಯುನ್ನತ ಸ್ಥಾನ ದೊರೆತಿದೆ. ಇಡೀ ದೇಶವೇ ಸಂಭ್ರಮಾಚರಣೆ ಮಾಡುತ್ತಿದೆ.


Share news

Related Articles

Leave a Reply

Your email address will not be published. Required fields are marked *

Back to top button