ರಾಷ್ಟ್ರೀಯ
Trending

ಕೇಂದ್ರ ಸರ್ಕಾರದ 2023-24ನೇ ಸಾಲಿನ ಬಜೆಟ್ ಪ್ರಮುಖ ಅಂಶಗಳು

Share news

ಮೀನುಗಾರಿಕೆ

ಮೀನುಗಾರಿಕೆಯನ್ನು ಬಲಗೊಳಿಸುವ ನಿಟ್ಟಿನಲ್ಲಿ ಸರ್ಕಾರವು ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ಅಡಿಯಲ್ಲಿ 6,000 ಕೋಟಿ ರೂಪಾಯಿಗಳ ಉಪಯೋಜನೆಯನ್ನು ಪ್ರಾರಂಭಿಸಲಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಕುಶಲಕರ್ಮಿ

ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ ಪ್ರಧಾನಮಂತ್ರಿ ವಿಶ್ವ ಕರ್ಮ ಕೌಶಲ್ ಸಮ್ಮಾನ್ ಎಂಬ ಹೆಸರಿನ ಯೋಜನೆಯನ್ನು ರಚಿಸಲಾಗಿದ್ದು ಇದು ಕುಶಲ ಕರ್ಮಿಗಳಿಗೆ ತಮ್ಮ ಉತ್ಪನ್ನಗಳ ಗುಣಮಟ್ಟ, ಪ್ರಮಾಣ ಮತ್ತು ತಲುಪುವಿಕೆಯನ್ನು ಸುಧಾರಿಸಲು ಅನುವು ಮಾಡಿಕೊಡುತ್ತದೆ ಎಂದು ವಿತ್ತ ಸಚಿವರು ಘೋಷಿಸಿದ್ದಾರೆ.

ಕೃಷಿ

ಕೃಷಿ ನವೋದ್ದಿಮೆಗಳನ್ನು ಸ್ಥಾಪಿಸುವುದಕ್ಕೆ ಯುವ ಉದ್ಯಮಿಗಳಿಗೆ ಸಹಕರಿಸಲು ಕೃಷಿ ವೇಗವರ್ಧಕ ನಿಧಿ ಹಾಗೂ ರಾಗಿ ಸೇರಿದಂತೆ ಸಿರಿಧಾನ್ಯಗಳ ಬೆಳೆ ಪದ್ಧತಿ ಸುಧಾರಣೆಗಾಗಿ ಸಂಶೋಧನೆ ನಡೆಸಲು ಹಾಗೂ ಉತ್ತಮ ಬೆಳೆ ಪದ್ಧತಿಯ ದಾಖಲಾತಿಗಾಗಿ ‘ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಮಿಲೆಟ್ ರೀಸರ್ಚ್’ ಸಂಸ್ಥೆಗೆ ಅಗತ್ಯ ನೆರವು ಒದಗಿಸಲಾಗುವುದು. ಎಂದು ನಿರ್ಮಾಲ ಸೀತಾರಾಮನ್ ಹೇಳಿದ್ದಾರೆ.

ಗರೀಬ್ ಕಲ್ಯಾಣ್ ಯೋಜನೆ

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಅನ್ವಯ ಬಡವರಿಗೆ ಇನ್ನೂ ಒಂದು ವರ್ಷ ಉಚಿತ ಆಹಾರ ನೀಡಲಾಗುವುದು ಎಂದು ನಿರ್ಮಾಲಾ ಸೀತರಾಮನ್ ಹೇಳಿದ್ದಾರೆ. ಹಾಗೂ ಬಡವರ ಪರವಾದ ಬಜೆಟ್ ಇದಾಗಿದ್ದು, ಕೋವಿಡ್ ಸಮಯದಲ್ಲಿಯೂ ಸರ್ಕಾರ ಬಡವರನ್ನು ಕೈಬಿಟ್ಟಿಲ್ಲ. ಯಾರಿಗೂ ಆಹಾರದ ಕೊರತೆಯಾಗದಂತೆ ನೋಡಿಕೊಂಡಿದೆ ಎಂದು ತಿಳಿಸಿದರು.

ಪ್ರಧಾನಮಂತ್ರಿ ಆವಾಸ್ ಯೋಜನೆ

ಪ್ರಧಾನಮಂತ್ರಿ ಆವಾಸ್ ಯೋಜನೆ ವೆಚ್ಚ 66% ರಷ್ಟು ಏರಿಕೆ ಮಾಡಲಾಗಿದ್ದು, ವೆಚ್ಚವನ್ನು 79,000 ಕೋಟಿ ರೂ.ಗೆ ಹೆಚ್ಚಿಸಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಶಿಕ್ಷಣ

ಶಿಕ್ಷಣಕ್ಕೆ ಸಾಕಷ್ಟು ಒತ್ತು ನೀಡುವ ಬಜೆಟ್ ಇದಾಗಿದ್ದು, ಗಿರಿಜನ ವಸತಿ ಶಾಲೆಗಳಿಗಾಗಿ 38,000 ಸಾವಿರ ಶಿಕ್ಷಕರ ನೇಮಕ ಹಾಗೂ ಮುಂದಿನ ಮೂರು ವರ್ಷದಲ್ಲಿ ದೇಶಾದ್ಯಂತ ಗಿರಿಜನರು ವಾಸಿಸುತ್ತಿರುವ ಪ್ರದೇಶಗಳಲ್ಲಿ ಏಕಲವ್ಯ ಮಾದರಿ ಶಾಲೆಗಳನ್ನು ಸ್ಥಾಪಿಸಲಾಗುವುದು ಎಂದು ವಿತ್ತ ಸಚಿವೆ ತಿಳಿಸಿದ್ದಾರೆ.

ತಂತ್ರಜ್ಞಾನ

ಕೃತಕ ಬುದ್ಧಿಮತ್ತೆಯ ಸಂಶೋಧನೆ ಮತ್ತು ಅಧ್ಯಯನಕ್ಕೆ 3 ಕೇಂದ್ರಗಳನ್ನು ಸ್ಥಾಪಿಸುವುದು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮೂರು ಶ್ರೇಷ್ಠತೆಯ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕೇಂದ್ರಗಳಮ್ಮು ಸ್ಥಾಪಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಕೌಶಲ್ಯ ಅಭಿವೃದ್ಧಿ

ದೇಶದಲ್ಲಿ ಯುವಕರಿಗೆ ಅಂತರಾಷ್ಟ್ರೀಯ ಮಟ್ಟದ ಕೌಶಲ್ಯ ನೀಡಲು ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ 4.0 ಅನ್ನು ಪ್ರಾರಂಭ ಹಾಗೂ ವಿವಿಧ ರಾಜ್ಯಗಳಲ್ಲಿ 30 ಸ್ಕಿಲ್ ಇಂಡಿಯಾ ಇಂಟರ್ನ್ಯಾಷನಲ್ ಸೆಂಟರ್‌ಗಳನ್ನು ಸ್ಥಾಪಿಸಲಾಗುವುದು ಎಂದು ವಿತ್ತ ಸಚಿವೆ ಹೇಳಿದ್ದಾರೆ.


Share news

Related Articles

Leave a Reply

Your email address will not be published. Required fields are marked *

Back to top button