ರಾಷ್ಟ್ರೀಯ

ಕೇಂದ್ರ ಸರ್ಕಾರದ ಕಿಸಾನ್ ಕಾರ್ಡ್ ಯೋಜನೆಯ ಮಾಹಿತಿ

Share news

ಕೇಂದ್ರ ಸರ್ಕಾರದ ಹಲವಾರು ರೈತರ ಕುರಿತಾದ ಯೋಜನೆಗಳಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯೂ ಒಂದು.ಕಿಸಾನ್ ಕ್ರೆಡಿಟ್ ಕಾರ್ಡ್ (KCC) ಯೋಜನೆಯನ್ನು 1998 ರಲ್ಲಿ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್‌ಗಳನ್ನು ವಿತರಿಸಲು ಬ್ಯಾಂಕುಗಳು ಏಕರೂಪದ ಅಳವಡಿಕೆಗಾಗಿ ಪರಿಚಯಿಸಲಾಯಿತು, ಇದರಿಂದಾಗಿ ರೈತರು ಬೀಜಗಳಂತಹ ಕೃಷಿ ಉತ್ಪನ್ನಗಳನ್ನು ಸುಲಭವಾಗಿ ಖರೀದಿಸಲು ಬಳಸಬಹುದಾಗಿತ್ತು. ರಸಗೊಬ್ಬರಗಳು, ಕೀಟನಾಶಕಗಳು ಇತ್ಯಾದಿಗಳು ಮತ್ತು ಅವುಗಳ ಉತ್ಪಾದನಾ ಅಗತ್ಯಗಳಿಗಾಗಿ ಹಣವನ್ನು ರೈತರ ಹೂಡಿಕೆ ಸಾಲದ ಅಗತ್ಯತೆಗಾಗಿ ಯೋಜನೆಯನ್ನು ಮತ್ತಷ್ಟು ವಿಸ್ತರಿಸಲಾಗಿದೆ. 2004 ರಲ್ಲಿ ಸಂಬಂಧಿತ ಮತ್ತು ಕೃಷಿಯೇತರ ಚಟುವಟಿಕೆಗಳಿಗೆ ವಿಸ್ತರಿಸಲಾಗಿದೆ.

18 ಡಿಸೆಂಬರ್ 2020 ರಂದು, ಪ್ರಧಾನಿ ನರೇಂದ್ರ ಮೋದಿ ಅವರು ಕಿಸಾನ್ ಕ್ರೆಡಿಟ್ ಕಾರ್ಡ್‌ಗೆ ಪರಿಷ್ಕೃತ ಯೋಜನೆಯನ್ನು ಪ್ರಾರಂಭಿಸಿದರು. ಇದು ರೈತರಿಗೆ ಅವರ ಸಾಗುವಳಿಗಾಗಿ ಒಂದೇ ವ್ಯವಸ್ಥೆ ಅಯಡಿಯಲ್ಲಿ ಸಕಾಲಿಕ ಸಾಲದ ಬೆಂಬಲವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯಡಿಯಲ್ಲಿ ರೈತರು ಅಡಮಾನವಿಲ್ಲದೆ ಶೇಕಡ 4 ರ ಕಡಿಮೆ ಬಡ್ಡಿ ದರದಲ್ಲಿ 1.6 ಲಕ್ಷ ರೂಪಾಯಿಯವರೆಗೆ ಸಾಲ ಸೌಲಭ್ಯ ನೀಡಲಾಗುವುದು.ಕಿಸಾನ್ ಕ್ರೆಡಿಟ್ ಕಾರ್ಡ್ ದಿಂದ ರೈತರು 3 ಲಕ್ಷ ರೂಪಾಯಿಯವರೆಗೆ ಸಾಲ ಪಡೆಯಬಹುದು.

ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯಲು ಬೇಕಾದ ಅರ್ಹತೆಗಳು :

ಅರ್ಜಿ ಸಲ್ಲಿಸುವವರು ರೈತರಾಗಿರಬೇಕು.ಈ ಕಾರ್ಡನ್ನು ಪಶುಸಂಗೋಪನೆ, ಮೀನುಗಾರಿಕೆಗೆ, ಬೀಜಗಳು, ರಸಗೊಬ್ಬರಗಳು, ಕೀಟನಾಶಕಗಳು ಕೃಷಿ ಸಂಬಂಧಿತ ಚಟುವಟಿಕೆಗೆ ಸಾಲ ನೀಡಲಾಗುವುದು. ಅರ್ಜಿದಾರರ ವಯಸ್ಸು 18 ರಿಂದ 75 ವಯೋಮಾನದೊಳಗಿರಬೇಕು. ರೈತರ ಬಳಿ ಜಮೀನಿನ ದಾಖಲೆ ಇರಬೇಕು. ಆಧಾರ್ ಕಾರ್ಡ್ ಹೊಂದಿರಬೇಕು. ಪಾಸ್ ಪೋರ್ಟ್ ಸೈಜಿನ ಫೋಟೋ ಇರಬೇಕು. ಬ್ಯಾಂಕ್ ಪಾಸ್ ಬುಕ್ ಇರಬೇಕು. ರೈತರು ಬೇರೆ ಯಾವುದೇ ಬ್ಯಾಂಕಿನಲ್ಲಿ ಸಾಲ ಪಡೆದಿರಬಾರದು.

ಕಿಸಾನ್ ಕ್ರೆಡಿಟ್ ಕಾರ್ಡ್ ಅರ್ಜಿ ಎಲ್ಲಾ ಬ್ಯಾಂಕಿನಲ್ಲಿ ಸಿಗುತ್ತದೆ. ಅಥವಾ ನೀವು ಆನ್ಲೈನ್ ನಲ್ಲಿ ಅರ್ಜಿ ಪಡೆಯಬಹುದು

https://pmkisan.gov.in/Documents/Kcc.pdf

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು, ಆಗ ಕಿಸಾನ್ ಕ್ರೆಡಿಟ್ ಕಾರ್ಡ್ ಫಾರ್ಮ್ ಓಪನ್ ಆಗುತ್ತದೆ. ಇದನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಕೇಳಲಾದ ಎಲ್ಲಾ ದಾಖಲೆಗಳನ್ನು ಹತ್ತಿರದ ಬ್ಯಾಂಕಿನಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ನಂತರ ಬ್ಯಾಂಕ್ ಮ್ಯಾನೇಜರ್ ಅರ್ಜಿ ಪರಿಶೀಲಿಸಿ 15 ದಿನಗಳೊಳಗೆ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡುವರು. ಈ ಕಾರ್ಡ್ ಸಹಾಯದಿಂದ ರೈತರು 3 ಲಕ್ಷ ರೂಪಾಯಿಯವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆಯಬಹುದು.

ಕಿಸಾನ್ ಕ್ರೆಡಿಟ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸುವಾಗ ನಿಮ್ಮ ಹಳೆಯ ಕೃಷಿ ಸಾಲದ ಬಗೆಗಿನ ಸಂಪೂರ್ಣ ಮಾಹಿತಿ ನೀಡಬೇಕಾಗುತ್ತದೆ. ಅದರ ಬಗ್ಗೆ ಸರಿಯಾದ ಮಾಹಿತಿಯನ್ನು ಒದಗಿಸದಿದ್ದರೆ ಕಿಸಾನ್ ಕ್ರೇಡಿಟ್ ಕಾರ್ಡ್ ನೀಡಲಾಗುವುದಿಲ್ಲ. ಮೂರು ವರ್ಷಗಳ ಅವಧಿಗೆ ಸಾಲ ಲಭ್ಯವಿರುತ್ತದೆ.

ಯಾವ ಚಟುವಟಿಕೆಗಳಿಗೆ ಸಾಲ ಪಡೆಯಬಹುದು?

ರೈತರು ತಮ್ಮ ಹೊಲಗಳಿಗೆ ಬಿತ್ತನೆ ಮಾಡುವುದು, ಬೆಳೆಗಳಿಗೆ ರಸಗೊಬ್ಬರ ಹಾಕುವುದು ಸೇರಿದಂತೆ ಇತರ ಕೃಷಿ ಚಟುವಟಿಕೆಗಳಿಗೆ ಸಾಲ ಪಡೆಯಲು ಕಿಸಾನ್ ಕ್ರೇಡಿಟ್ ಕಾರ್ಡ್ ಬಳಸಬಹುದು ಮೀನುಗಾರಿಕೆಗೆ ವಿಸ್ತರಣೆಯಾಯಿತು ಕಿಸಾನ್ ಕ್ರೆಡಿಟ್ ಕಾರ್ಡ್ ರೈತರ ಬಳಿ ಕಿಸಾನ್ ಕ್ರೇಡಿಟ್ ಕಾರ್ಡ್ ಇದ್ದರೆ ನಿಮ್ಮ ಹತ್ತಿರದ ಬ್ಯಾಂಕುಗಳಿಂದ ನಿಮಗೆ ಕೃಷಿ ಚಟುವಟಿಕೆ, ಪಶುಪಾಲನೆಗೆ ಹಾಗೂ ಮೀನುಗಾರಿಕೆಗೂ ಸಾಲ ಸೌಲಭ್ಯ ನೀಡಬೇಕೆಂದು ಇತ್ತೀಚೆಗೆ ಮುಖ್ಯಮಂತ್ರಿಯುವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.Share news

Related Articles

Leave a Reply

Your email address will not be published. Required fields are marked *

Back to top button