ರಾಷ್ಟ್ರೀಯ

ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾ.ಯುಯು ಲಲಿತ್

Share news

ಭಾರತದ ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿಯಾಗಿದ್ದ ಎನ್​.ವಿ ರಮಣ ನಿವೃತ್ತಿಯ ಬಳಿಕ ಇಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಉದಯ್ ಉಮೇಶ್ ಲಲಿತ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರಿಗೆ ಪ್ರಮಾಣವಚನ ಬೋಧಿಸಿದ್ದಾರೆ.

ಮುಂದಿನ 74 ದಿನಗಳ ಕಾಲ ಭಾರತದ ನ್ಯಾಯಾಂಗ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಯುಯು ಲಲಿತ್ ಅವರು ಕಾರ್ಯನಿರ್ವಹಿಸಲಿದ್ದಾರೆ. ಉದಯ್ ಉಮೇಶ್ ಲಲಿತ್ ಅವರು ನವೆಂಬರ್ 9, 1957 ರಂದು ಮಹಾರಾಷ್ಟ್ರದ ಸೋಲಾಪುರದಲ್ಲಿ ಜನಿಸಿದರು. ಅವರ ಇಡೀ ಕುಟುಂಬವೇ ವಕೀಲರು ಮತ್ತು ನ್ಯಾಯಮೂರ್ತಿಗಳ ಕುಟುಂಬವಾಗಿದೆ. ಮಹಾರಾಷ್ಟ್ರದ ಯುಯು ಲಲಿತ್‌ ಅವರ ಕುಟುಂಬಕ್ಕೆ 102 ವರ್ಷ. ಅವರ ಅಜ್ಜ ರಂಗನಾಥ್ ಲಲಿತ್ ಭಾರತಕ್ಕೆ ಸ್ವಾತಂತ್ರ್ಯ ಬರುವ ಮುಂಚೆಯೇ ಸೊಲ್ಲಾಪುರದಲ್ಲಿ ವಕೀಲರಾಗಿದ್ದರು. ತಂದೆ ಯು ಆರ್ ಲಲಿತ್ ಅವರು ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠದಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿದ್ದರು ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಹಿರಿಯ ವಕೀಲರಾಗಿದ್ದರು.

ನ್ಯಾಯಮೂರ್ತಿ ಲಲಿತ್ ಅವರು ಜೂನ್ 1983 ರಲ್ಲಿ ವಕೀಲರಾಗಿ ನೋಂದಾಯಿಸಿಕೊಂಡರು. ಕ್ರಿಮಿನಲ್ ಕಾನೂನಿನಲ್ಲಿ ಪರಿಣತಿ ಪಡೆದಿದ್ದಾರೆ. 1983 ರಿಂದ 1985 ರವರೆಗೆ ಬಾಂಬೆ ಉಚ್ಚ ನ್ಯಾಯಾಲಯದಲ್ಲಿ ಅಭ್ಯಾಸ ಮಾಡಿದರು.ಇಂದು ನ್ಯಾಯಮೂರ್ತಿ ಯುಯು ಲಲಿತ್ ಸಿಜೆಐ ಆಗಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಅವರ ಕುಟುಂಬದ 3 ತಲೆಮಾರುಗಳು ಹಾಜರಿದ್ದುದು ವಿಶೇಷವಾಗಿತ್ತು. ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರ 90 ವರ್ಷದ ತಂದೆ ಉಮೇಶ್ ರಂಗನಾಥ್ ಲಲಿತ್ ಕೂಡ ಇಂದು ಪ್ರಮಾಣವಚನ ಸ್ವೀಕಾರದ ವೇಳೆ ಉಪಸ್ಥಿತರಿದ್ದರು. ಪತ್ನಿ ಅಮಿತಾ ಲಲಿತ್ ಮತ್ತು ಅವರ ಇಬ್ಬರು ಪುತ್ರರಾದ ಹರ್ಷದ್ ಮತ್ತು ಶ್ರೀಯಶ್ ಸಹ ಇಂದು ಉಪಸ್ಥಿತರಿದ್ದರು.


Share news

Related Articles

Leave a Reply

Your email address will not be published. Required fields are marked *

Back to top button