ಪೋಷಕರೇ, ನಿಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಬಗ್ಗೆ ಯೋಚಿಸುತ್ತಿದ್ದೀರಾ..? ಅದರಲ್ಲೂ ನವೋದಯ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳು ವಿದ್ಯಾಭ್ಯಾಸ ಪಡೆಯಬೇಕು ಎಂಬ ಹಂಬಲವಿದೆಯೇ..? ಮತ್ಯಾಕೆ ತಡ..!! ನಿಮಗಾಗಿ ಸಿಹಿ ಸುದ್ದಿ ಇಲ್ಲಿದೆ ನೋಡಿ. ಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಸಂಪೂರ್ಣವಾಗಿ ಓದಿರಿ.
ಸಮಿತಿಯು 2025-26ನೇ ಸಾಲಿನಲ್ಲಿ ನವೋದಯ ವಿದ್ಯಾಲಯದಲ್ಲಿ ಶಿಕ್ಷಣ ಪಡೆಯಲಿಚ್ಛಿಸುವ ವಿದ್ಯಾರ್ಥಿಗಳಿಗೆ 6ನೇ ತರಗತಿ ಪ್ರವೇಶಾತಿಗಾಗಿ ಪರೀಕ್ಷೆ ಬರೆಯಲು ಅರ್ಜಿ ಆಹ್ವಾನಿಸಿದೆ. 2024-25ನೇ ಶೈಕ್ಷಣಿಕ ವರ್ಷದಲ್ಲಿ ಪ್ರಸ್ತುತ 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16.09.2024 ಆಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ 2024 (K-SET) ಗೆ ಅಧಿಸೂಚನೆ ಪ್ರಕಟಿಸಿ ಅರ್ಜಿ ಆಹ್ವಾನ
ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಯಾರ್ಯಾರು ಅರ್ಹರು?
1.ವಿದ್ಯಾರ್ಥಿಗಳು ಪ್ರಸ್ತುತ 2024-25ನೇ ಶೈಕ್ಷಣಿಕ ವರ್ಷದಲ್ಲಿ 5ನೇ ತರಗತಿಯಲ್ಲಿ ಓದುತ್ತಿರುವವರು ಆಗಿರಬೇಕು.
2.ವಿದ್ಯಾರ್ಥಿಯು ತಾನು ಅಧಿಕೃತವಾಗಿ ವಾಸವಾಗಿರುವ ಜಿಲ್ಲೆಯಲ್ಲೇ ಸರ್ಕಾರಿ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಯಲ್ಲಿ ವಿದ್ಯಾಭ್ಯಾಸ ಪಡೆಯುತ್ತಿರಬೇಕು. ಆಯಾ ಜಿಲ್ಲೆಯ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಗೆ ಮಾತ್ರ ಅರ್ಜಿ ಸಲ್ಲಿಸಬೇಕು.
3.ಶೈಕ್ಷಣಿಕ ವರ್ಷದಲ್ಲಿ ಶಾಲಾ ತರಗತಿಗಳಿಗೆ ಬಂದು ಶಿಕ್ಷಣ ಪಡೆದಿರಬೇಕು. ಅಲ್ಲದೆ ಸರ್ಕಾರಿ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ ಮೂರನೇ ಹಾಗೂ ನಾಲ್ಕನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು.
4.ನವೋದಯ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ದಿನಾಂಕ 01.05.2013 ರಿಂದ 31.07.2015ರ ಒಳಗೆ ಜನಿಸಿದವರು ಆಗಿರಬೇಕು.
ಇದನ್ನೂ ಓದಿ: ಭಾರಧ್ವಾಜಾಶ್ರಮ : ವೇದಾಧ್ಯಯನಕ್ಕೊಂದು ಗುರುಕುಲ..
ಮೀಸಲಾತಿ
1.ಶೇಕಡಾ 75%ರಷ್ಟು ಸೀಟುಗಳು ಆಯಾ ಜಿಲ್ಲೆಯ ಗ್ರಾಮೀಣ ವಿದ್ಯಾರ್ಥಿಗಳಿಗೆ ಮೀಸಲಾಗಿರುತ್ತದೆ.
2.ಸರ್ಕಾರದ ನಿಯಮದಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಹಾಗೂ ದಿವ್ಯಾಂಗ ಚೇತನ ವಿದ್ಯಾರ್ಥಿಗಳಿಗೆ ಮೀಸಲಾತಿ ಇರುತ್ತದೆ.
3.1/3ರಷ್ಟು ಸೀಟುಗಳು ಹೆಣ್ಣು ಮಕ್ಕಳಿಗೆ ಮೀಸಲಾಗಿರುತ್ತದೆ.
ನವೋದಯ ವಿದ್ಯಾಲಯ ದ ವಿಶೇಷತೆ
ಭಾರತದ ಹಲವು ಭಾಗಗಳಲ್ಲಿ ಹಲವು ರಾಜ್ಯಗಳಲ್ಲಿ ಆಯ್ದ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿದೆ. ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ವಸತಿ ವ್ಯವಸ್ಥೆಯಿರುತ್ತದೆ. ಹೆಣ್ಣು ಮತ್ತು ಗಂಡು ಮಕ್ಕಳಿಗೆ ಪ್ರತ್ಯೇಕ ವಿದ್ಯಾರ್ಥಿ ನಿಲಯಗಳು ಇವೆ. ಕ್ರೀಡೆ, ಎನ್.ಸಿ.ಸಿ, ಎನ್.ಎಸ್.ಎಸ್, ಸ್ಕೌಟ್ಸ್ ಗೈಡ್ಸ್ ಎಲ್ಲದರಲ್ಲೂ ಭಾಗವಹಿಸುವ ಅವಕಾಶ ವಿದ್ಯಾರ್ಥಿಗಳಿಗೆ ಇದೆ.
ಪರೀಕ್ಷಾ ದಿನಾಂಕ 18.01.2025(winter bound) ಹಾಗೂ 12.04.2025(summer bound) ಎಂದು ಪ್ರಕಟಣೆಯಲ್ಲಿ ನವೋದಯ ವಿದ್ಯಾಲಯ ಸಮಿತಿಯು ತಿಳಿಸಿದೆ.
ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ನವೋದಯ ವಿದ್ಯಾಲಯ ಸಮಿತಿಯ ಅಧಿಕೃತ ವೆಬ್ಸೈಟ್ https://navodaya.gov.in ಗೆ ಭೇಟಿ ನೀಡಿ.