Others

ಉಗ್ರರ ಭಾರತದಲ್ಲಿರುವ ಆಸ್ತಿ ವಶಪಡಿಸಿಕೊಳ್ಳುತ್ತಿರುವ ಎನ್‌ಐಎ

Share news

ಖಲಿಸ್ತಾನ್ ಉಗ್ರರ ವಿರುದ್ಧ ಕಾರ್ಯಾಚರಣೆ ಆರಂಭಿಸಿರುವ ಎನ್‌ಐಎ ಹಾಗೂ ಭಾರತೀಯ ಭದ್ರತಾ ಏಜೆನ್ಸಿಗಳು, ಈ ಉಗ್ರರಿಗೆ ಸೇರಿದ ಭಾರತದಲ್ಲಿರುವ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುತ್ತಿದ್ದಾರೆ.

19 ಕುಖ್ಯಾತ ಖಲಿಸ್ತಾನ ಉಗ್ರರ ಪಟ್ಟಿಯನ್ನು ಸಿದ್ದಪಡಿಸಲಾಗಿದ್ದು, ಈ ಉಗ್ರರು ಬ್ರಿಟನ್, ಅಮೆರಿಕ, ಕೆನಡಾ, ದುಬೈ, ಪಾಕಿಸ್ತಾನ ಸೇರಿದಂತೆ ಹಲವು ದೇಶಗಳಲ್ಲಿ ನೆಲೆಸಿದ್ದಾರೆ. ಈ ಉಗ್ರರನ್ನು ಭಾರತದ ವಶಕ್ಕೆ ಒಪ್ಪಿಸುವಂತೆ ಆಯಾ ದೇಶಗಳಿಗೆ ಭಾರತ ಹಲವು ವರ್ಷಗಳಿಂದ ಬೇಡಿಕೆ ಇಟ್ಟಿತ್ತು. ಆದರೆ, ಭಾರತದ ಮನವಿಗೆ ಸೂಕ್ತ ಸ್ಪಂದನೆ ಸಿಕ್ಕಿರಲಿಲ್ಲ.

ಉಗ್ರರಿಗೆ ಸೇರಿದ ಭಾರತದಲ್ಲಿ ಇರುವ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಕಾರ್ಯಾಚರಣೆ ಶುರುವಾಗಿದ್ದು, ಈ ಪೈಕಿ ಗುರುಪತ್ವಂತ್ ಸಿಂಗ್ ಪನ್ನುಗೆ ಸೇರಿದ ಆಸ್ತಿಗಳನ್ನು ಮೊದಲಿಗೆ ಸರ್ಕಾರ ತನ್ನ ವಶಕ್ಕೆ ಪಡೆದಿದೆ.


Share news

Related Articles

Leave a Reply

Your email address will not be published. Required fields are marked *

Back to top button