Others

ಸೆ.24 ರಿಂದ ಹೈದರಾಬಾದ್‌ ಬೆಂಗಳೂರು ನಡುವೆ ವಂದೇ ಭಾರತ್‌ ರೈಲು ಸಂಚಾರ

Share news

ಕರ್ನಾಟಕ ರಾಜ್ಯದ 3ನೇ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ ಮುಹೂರ್ತ ನಿಗದಿಯಾಗಿದೆ. ಸೆ.24ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೈದರಾಬಾದ್ -ಕಾಚಿಗುಡ -ಯಶವಂತಪುರ ನಡುವೆ ಸಂಚರಿಸುವ ವಂದೇ ಭಾರತ್ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ.

ಹೈದರಾಬಾದ್ ಮತ್ತು ಬೆಂಗಳೂರು ದಕ್ಷಿಣ ಭಾರತದ ಐಟಿ ನಗರಗಳಾಗಿದ್ದು, ಇವುಗಳ ನಡುವೆ ಮೊದಲ ವಂದೇ ಭಾರತ್ ರೈಲು ಸಂಚರಿಸಲಿದೆ. ಗುರುವಾರ ಬೆಳಿಗ್ಗೆ ಕಾಚಿಗುಡದಿಂದ ಹೊರಟು ಮಧ್ಯಾಹ್ನ 2 ಗಂಟೆಗೆ ಯಶವಂತಪುರ ರೈಲು ನಿಲ್ದಾಣ ತಲುಪುವ ಸಾಧ್ಯತೆ ಇದೆ. ಯಶವಂತಪುರದಿಂದ 2.45ಕ್ಕೆ ಹೊರಡಲಿದೆ.


Share news

Related Articles

Leave a Reply

Your email address will not be published. Required fields are marked *

Back to top button