Schemes

ಸಮಾಜ ಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸುವುದು ಹೇಗೆ ?

Share news

2023ನೇ ಸಾಲಿನಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಪಾಸ್‌ ಆದ ವಿದ್ಯಾರ್ಥಿಗಳಿಗೆ ಈ ಪ್ರೋತ್ಸಾಹಧನವನ್ನು ನೀಡಲಾಗುತ್ತಿದ್ದು, ಸಮಾಜ ಕಲ್ಯಾಣ ಇಲಾಖೆಯು ವಿವಿಧ ಕೋರ್ಸ್‌ಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

‘ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ’ ಏನಿದು, ಅರ್ಜಿ ಸಲ್ಲಿಸುವುದು ಹೇಗೆ ?

ಈ ಪ್ರೋತ್ಸಾಹಧನಕ್ಕೆ ವಿವಿಧ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31, 2023ರ ವರೆಗೆ ಅವಕಾಶವಿದ್ದು, ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ sw.kar.nic.in ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ. ಆನ್‌ಲೈನ್‌ ಅರ್ಜಿಗಳನ್ನು ಸಲ್ಲಿಸಲು ಮಾತ್ರ ಅವಕಾಶ ನೀಡಲಾಗಿದ್ದು, ಆಫ್‌ಲೈನ್ ಅರ್ಜಿಗಳಿಗೆ ಅವಕಾಶವಿಲ್ಲ.

ಆನ್‌ಲೈನ್‌ ಅರ್ಜಿ ಸಲ್ಲಿಸುವಾಗ ಒಂದು ವೇಳೆ ಕಾಲೇಜಿನ ಹೆಸರು ಇಲ್ಲದೆ ಹೋದಲ್ಲಿ, ಕಾಲೇಜಿನ ಹೆಸರನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ಸೇರಿಸಲು ಸಂಬಂಧಪಟ್ಟ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಜಿಲ್ಲಾ ಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಲು ಸೂಚಿಸಲಾಗಿದೆ.

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ವಿವರ ಇಲ್ಲಿದೆ..

ಪ್ರೋತ್ಸಾಹಧನದ ವಿವರ

  • ದ್ವಿತೀಯ ಪಿಯುಸಿ ಮತ್ತು ಮೂರು ವರ್ಷದ ಪಾಲಿಟೆಕ್ನಿಕ್‌ ಡಿಪ್ಲೊಮ ವಿದ್ಯಾರ್ಥಿಗಳಿಗೆ – ರೂ. 20,000/-.
  • ಪದವಿ ವಿದ್ಯಾರ್ಥಿಗಳಿಗೆ – ರೂ. 25,000 /-.
  • ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ – ರೂ. 30,000/-.
  • ಅಗ್ರಿಕಲ್ಚರ್‌, ಇಂಜಿನಿಯರ್, ವೆಟರನರಿ, ಮೆಡಿಷನ್ ವಿದ್ಯಾರ್ಥಿಗಳಿಗೆ – ರೂ.35,000/-.

ತುರ್ತು ಸಂದರ್ಭದಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ಸಹಾಯಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ?


Share news

Related Articles

Leave a Reply

Your email address will not be published. Required fields are marked *

Back to top button