Schemes

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರು ಮತ್ತು ಪಿಯು ಉಪನ್ಯಾಸಕರ ಮಕ್ಕಳ ವಿಶೇಷ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ | ಇಲ್ಲಿದೆ ಮಾಹಿತಿ..

Share news

ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿಯು ಅರ್ಜಿ ಆಹ್ವಾನಿಸಿದ್ದು, 2022ನೇ ಸಾಲಿನ ಸಿಇಟಿಯಲ್ಲಿ ಅತಿಹೆಚ್ಚು ಅಂಕ ಗಳಿಸಿ 2022-23ನೇ ಸಾಲಿನಲ್ಲಿ ವೈದ್ಯಕೀಯ, ಇಂಜಿನಿಯರಿಂಗ್, ಕೃಷಿ ವಿಜ್ಞಾನ ಕೋರ್ಸ್‌ಗಳಿಗೆ ದಾಖಲಾತಿ ಪಡೆದಿರುವ ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರು ಮತ್ತು ಪಿಯು ಉಪನ್ಯಾಸಕರ ಮಕ್ಕಳ ವಿಶೇಷ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

‘ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ’ ಏನಿದು, ಅರ್ಜಿ ಸಲ್ಲಿಸುವುದು ಹೇಗೆ ?

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 15, 2023ರ ಒಳಗಾಗಿ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ https://www.schooleducation.kar.nic.in ಗೆ ಭೇಟಿ ನೀಡಿ ನಿಗದಿತ ಲಿಂಕ್ ಬಳಸಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿದೆ.

ತುರ್ತು ಸಂದರ್ಭದಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ಸಹಾಯಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ?

2022ನೇ ಶೈಕ್ಷಣಿಕ ಸಾಲಿನ ಸಿಇಟಿ ರ್ಯಾಂಕ್ ಪಟ್ಟಿ. ವಿದ್ಯಾರ್ಥಿಗಳು ಕಳೆದ 2022ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ಹೆಚ್ಚು ಅಂಕ ಪಡೆದಿರಬೇಕು. ವಿದ್ಯಾರ್ಥಿಗಳು ಸಂಸ್ಥೆಯ ಮುಖ್ಯಸ್ಥರು ದೃಢಿಕರಿಸಿದ ಅಂಕ ಪಟ್ಟಿಯನ್ನು ಸಲ್ಲಿಸಬೇಕು.
ಆನ್‌ಲೈನ್‌ ಅರ್ಜಿಗಳನ್ನು ಪರಿಶೀಲಿಸಿ ಮೆರಿಟ್ ಆಧಾರದ ಮೇಲೆ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಲಾಗುತ್ತದೆ.
ಪ್ರತಿಭಾವಂತ ವಿದ್ಯಾರ್ಥಿ ವೇತನದ ಧನಸಹಾಯಕ್ಕಾಗಿ ಬರುವ ಭೌತಿಕ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ವಿವರ ಇಲ್ಲಿದೆ..

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15, 2023 ಕೊನೆಯ ದಿನಾಂಕ


Share news

Related Articles

Leave a Reply

Your email address will not be published. Required fields are marked *

Back to top button