Schemes

ವಿದ್ಯಾಧನ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ… ಜುಲೈ 31 ಕೊನೆಯ ದಿನಾಂಕ

Share news

ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಾಲೇಜು ಶಿಕ್ಷಣಕ್ಕೆ ಬೆಂಬಲಿಸಲು ಸರೋಜಿನಿ ದಾಮೋದರನ್ ಪ್ರತಿಷ್ಠಾನದ ವತಿಯಿಂದ 2023-24ನೇ ಸಾಲಿನ ‘ವಿದ್ಯಾಧನ್” ವಿದ್ಯಾರ್ಥಿವೇತನಕ್ಕೆ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 31-07-2023.

ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ (KSOU) ಹಲವು ಕೋರ್ಸ್​ಗಳಿಗೆ ಪ್ರವೇಶ ಆರಂಭ | ಯಾವೆಲ್ಲ ಕೋರ್ಸ್ ಇಲ್ಲಿವೆ ಮಾಹಿತಿ.

ವಿದ್ಯಾರ್ಥಿವೇತನಕ್ಕೆ 10ನೇ ತರಗತಿಯಲ್ಲಿ ಉತ್ತೀರ್ಣರಾದ, ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ಮೇಲೆ ವಿದ್ಯಾರ್ಥಿಗಳನ್ನು ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ವಿದ್ಯಾರ್ಥಿವೇತನಕ್ಕೆ ಆಯ್ಕೆ ಮಾಡಲಾಗುತ್ತದೆ. ವಿದ್ಯಾರ್ಥಿಗಳ ಆಸಕ್ತಿಗೆ ಅನುಗುಣವಾಗಿ ಪದವಿಯವರೆಗೂ ವಿದ್ಯಾರ್ಥಿವೇತನವನ್ನು ಮುಂದುವರೆಸಲಾಗುವುದು.

ಭೇಟಿ ನೀಡಿ :  https://www.vidyadhan.org/apply

ಯಾರು ಅರ್ಜಿ ಸಲ್ಲಿಸಲು ಅರ್ಹರು

  • ಮಾನ್ಯತೆ ಪಡೆದ ಶಾಲೆಗಳಿಂದ SSLC/ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • 10ನೇ ತರಗತಿ ಅಥವಾ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡ 90 ರಷ್ಟು ಅಂಕಗಳನ್ನು ಪಡೆದಿರಬೇಕು.
  • ಎಲ್ಲಾ ಮೂಲಗಳಿಂದ ಕುಟುಂಬದ ಆದಾಯ 2 ಲಕ್ಷಕ್ಕಿಂತ ಕಡಿಮೆ ಇರಬೇಕು. ವಿಕಲಚೇತನ ವಿದ್ಯಾರ್ಥಿಗಳಿಗೆ 75% ರಷ್ಟು ಅಂಕಪಡೆದಿರಬೇಕು.

NCC ವಿದ್ಯಾರ್ಥಿಗಳಿಗೆ ಭಾರತದ ಮಿಲಿಟರಿ ಪಡೆಯಲ್ಲಿ ಉದ್ಯೋಗ ಅವಕಾಶ | ಅರ್ಜಿ ಸಲ್ಲಿಸಲು ಸಂಪೂರ್ಣ ವಿವರ ಇಲ್ಲಿದೆ..

ಸರೋಜಿನಿ ದಾಮೋಧರನ್ ಫೌಂಡೇಷನ್ ವಿದ್ಯಾರ್ಥಿಗಳು ಒದಗಿಸಿದ ಶೈಕ್ಷಣಿಕ ಸಾಧನೆ ಹಾಗೂ ಅರ್ಜಿಯ ಮಾಹಿತಿಯನ್ನು ಆಧರಿಸಿ ಆಯ್ಕೆ ಪ್ರಕ್ರಿಯೆ ಮಾಡಲಾಗುತ್ತದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪರೀಕ್ಷೆ ಮತ್ತು ಸಂದರ್ಶನವನ್ನು ನಡೆಸಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಕೋರ್ಸ್‌ಗೆ ಅನುಗುಣವಾಗಿ ವಾರ್ಷಿಕ ರೂ. 10,000 ದಿಂದ ರೂ. 60,000 ವರೆಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 31-07-2023.

ಪರೀಕ್ಷೆ/ ಸಂದರ್ಶನ ದಿನಾಂಕ – 20-08-2023.

ಪರೀಕ್ಷೆ ಹಾಗೂ ಸಂದರ್ಶನ ನಡೆಯುವ ಸ್ಥಳ ಮತ್ತು ದಿನಾಂಕವನ್ನು ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ ತಿಳಿಸಲಾಗುವುದು.

ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದಲ್ಲಿ (KSOU) ಏಕಕಾಲದಲ್ಲಿ ಎರಡು ಕೋರ್ಸ್‌ಗಳಿಗೆ ಪ್ರವೇಶ ಪಡೆಯಬಹುದು.

ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು

  • ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ.
  • 10ನೇ ತರಗತಿ ಪರೀಕ್ಷೆಯ ಅಂಕ ಪಟ್ಟಿ.
  • ಆದಾಯ ಪ್ರಮಾಣ ಪತ್ರ.
  • ವಿಕಲಚೇತನ ದೃಡಿಕರಣ ಪತ್ರ.

ಹೆಚ್ಚಿನ ಮಾಹಿತಿಗಾಗಿ ವಿದ್ಯಾದನ್ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್‌ ಅರ್ಜಿ ಸಲ್ಲಿಸಬೆಕು.

 https://www.vidyadhan.org/apply


Share news

Related Articles

Leave a Reply

Your email address will not be published. Required fields are marked *

Back to top button