Schemes

ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್‌ ಅಳವಡಿಕೆಗೆ ನವೆಂಬರ್ 17 ಕೊನೆಯ ದಿನ |ಪಡೆಯುವುದು ಹೇಗೆ?

Share news

ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್‌ (HSRP) ಅಳವಡಿಕೆ ಕಡ್ಡಾಯವಾಗಿದೆ. ಸಾರಿಗೆ ಇಲಾಖೆ ಪ್ರಕಾರ ಹಳೆಯ ವಾಹನಗಳಿಗೆ ಪ್ಲೇಟ್ ಅಳವಡಿಕೆ ನವೆಂಬರ್ 17 ಕೊನೆಯ ದಿನವಾಗಿದೆ. ಏಪ್ರಿಲ್ 2019 ಕ್ಕಿಂತ ಮೊದಲು ನೋಂದಣಿ ಮಾಡಿಸಿಕೊಂಡ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರ್ಯಾಕ್ಟರ್, ಪ್ರಯಾಣಿಕರ ಕಾರು ಸೇರಿ ಎಲ್ಲ ಹಳೆಯ ವಾಹನಗಳಿಗೆ ಈ ನಿಯಮ ಅನ್ವಯವಾಗಲಿದೆ.

ಪಡೆಯುವುದು ಹೇಗೆ?

ಕರ್ನಾಟಕದಲ್ಲಿ ಹೆಚ್‌ಎಸ್‌ಆರ್‌ಪಿ ಅಥವಾ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ಸ್ ಅನ್ನು ಪಡೆಯಲು ಕರ್ನಾಟಕ ಸಾರಿಗೆ ಇಲಾಖೆಯ ವೆಬ್‌ಸೈಟ್‌ https://transport.karnataka.gov.in ಅಥವಾ www.siam.in ಗೆ ಭೇಟಿ ನೀಡಬೇಕು. ಅಲ್ಲಿ ಬುಕ್‌ ಹೆಚ್‌ಎಸ್‌ಆರ್‌ಪಿ ಮೇಲೆ ಕ್ಲಿಕ್ ಮಾಡಿ. ಅಲ್ಲಿ ನಿಮ್ಮ ವಾಹನದ ಉತ್ಪಾದಕ ಕಂಪನಿಯನ್ನು ಆಯ್ಕೆ ಮಾಡಿ. ಬಳಿಕ ಅಲ್ಲಿ ಬೇಸಿಕ್ ವೆಹಿಕಲ್ ಡಿಟೇಲ್ಸ್ ಕೇಳಿರುವುದನ್ನು ಭರ್ತಿ ಮಾಡಬೇಕು. ಅದಾದ ಬಳಿಕ ಡೀಲರ್ ಲೊಕೇಶನ್‌ ಅನ್ನು ನಿಮ್ಮ ಅನುಕೂಲಕ್ಕೆ ತಕ್ಕಂತೆ ಸೆಲೆಕ್ಟ್ ಮಾಡಿಕೊಳ್ಳಬೇಕು. ಹೆಚ್‌ಎಸ್‌ಆರ್‌ಪಿಯನ್ನು ಫಿಕ್ಸ್ ಮಾಡುವುದಕ್ಕಾಗಿ ಡೀಲರ್‌ ಲೊಕೇಶನ್ ಸೆಲೆಕ್ಟ್ ಮಾಡಬೇಕಾಗಿರುವಂಥದ್ದು. ಹೆಚ್‌ಎಸ್‌ಆರ್‌ಪಿಗೆ ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿಸಬೇಕು. ನಗದು ಪಾವತಿ ಮಾಡಬೇಕಾದ್ದಿಲ್ಲ.

ಇಷ್ಟು ಮಾಡಿದ ಬಳಿಕ ವಾಹನದ ಮಾಲೀಕರ ಮೊಬೈಲ್ ನಂಬರ್‌ಗೆ ಒಟಿಪಿ ಬರುತ್ತದೆ. ಮಾಲೀಕರು ತಮ್ಮ ಸಮಯಾವಕಾಶ ನೋಡಿಕೊಂಡು ನಂಬರ್ ಪ್ಲೇಟ್ ಅನ್ನು ವಾಹನಕ್ಕೆ ಜೋಡಿಸಲು ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಬಹುದು. ಬಳಿಕ ವಾಹನ ಮಾಲೀಕರು ನಿಗದಿ ಮಾಡಿಕೊಂಡು ಅಂಗೀಕೃತವಾದ ದಿನಾಂಕ ಮತ್ತು ಸಮಯಕ್ಕೆ ಅವರ ವಾಹನ ಉತ್ಪಾದಕರು/ ಡೀಲರ್‌ ಬಳಿ ಹೋಗಿ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗಳನ್ನು ವಾಹನಕ್ಕೆ ಅಳವಡಿಸಬಹುದು. ಕೆಲವು ಡೀಲರ್‌ಗಳು ವಾಹನ ಮಾಲೀಕರ ಮನೆಬಾಗಿಲಿಗೆ ಈ ಸೇವೆಯನ್ನು ಒದಗಿಸಬಹುದು.


Share news

Related Articles

Leave a Reply

Your email address will not be published. Required fields are marked *

Back to top button