Schemes

‘ಸಿವಿಲ್ ಪ್ರಕ್ರಿಯಾ ಸಂಹಿತೆ’ (ತಿದ್ದುಪಡಿ) ವಿಧೇಯಕ ಅಂಗೀಕಾರ | ಏನಿದು ವಿಧೇಯಕ ?

Share news

ವಿಧಾನಸಭೆಯಲ್ಲಿ ಅಂಗೀಕಾರ ಪಡೆದಿದ್ದ ‘ಸಿವಿಲ್ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ವಿಧೇಯಕ 2023″ ಅನ್ನು ಮೇಲ್ಮನೆಯಲ್ಲಿ ಅಂಗೀಕರಿಸಲಾಯಿತು.

ಏನಿದು ವಿಧೇಯಕ ?

ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲಾ ಮಾದರಿಯ ನ್ಯಾಯಾಲಯಗಳಲ್ಲೂ ಸಣ್ಣ, ಅತಿ ಸಣ್ಣ ರೈತರು ಮತ್ತು ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ನ್ಯಾಯಾಲಯಗಳಲ್ಲಿ ದೀರ್ಘಕಾಲದಿಂದ ಬಾಕಿ ಇರುವಂತಹ ಪ್ರಕರಣಗಳು ಹಾಗೂ ಮೊಕದ್ದಮೆಗಳನ್ನು ಮುನ್ನಡೆಸಲು ಸಾಮರ್ಥ್ಯವಿಲ್ಲದ ವ್ಯಕ್ತಿಗಳನ್ನು ಒಳಗೊಂಡಿರುವ ಪ್ರಕರಣಗಳ ಶೀಘ್ರ ವಿಲೇವಾರಿಗಾಗಿ ಉಪಬಂಧ ಕಲ್ಪಿಸುವುದು ಈ ವಿಧೇಯಕದ ಉದ್ದೇಶ.

ಏನಿದು ಕೇಂದ್ರ ಸರ್ಕಾರದ ಮಹಿಳಾ ಸಮ್ಮಾನ್ ಉಳಿತಾಯ ಪತ್ರ ಯೋಜನೆ ? ಇಲ್ಲಿದೆ ಮಾಹಿತಿ..

ನ್ಯಾಯಾಂಗ ವ್ಯವಸ್ಥೆಯಲ್ಲಿ ನ್ಯಾಯದಾನ ವಿಳಂಬವಾಗುತ್ತಿರುವುದರಿಂದ ಸಣ್ಣ ರೈತರು ಹಾಗೂ ಆರ್ಥಿಕ ದುರ್ಬಲ ವರ್ಗದವರಿಗೆ ತೊಂದರೆಯಾಗುತ್ತಿದೆ. ಎಷ್ಟೋ ಮಂದಿ ಆರ್ಥಿಕ ಬಲ ಇಲ್ಲದೆ ಪ್ರಕರಣಗಳನ್ನು ಅರ್ಧಕ್ಕೆ ಕೈಬಿಟ್ಟಿದ್ದಾರೆ. ಹೀಗಾಗಿ ನ್ಯಾಯಾಲಯಗಳಲ್ಲಿ ತ್ವರಿತಗತಿಯ ನ್ಯಾಯ ದಾನಕ್ಕಾಗಿ ಈ ವಿಧೇಯಕ ರೂಪಿಸಲಾಗಿದೆ.

ವಿಧೇಯಕದಲ್ಲಿ ಪ್ರಮುಖವಾಗಿ ಯಾವುದೇ ಕೋ‌ನಲ್ಲಿ ಸಣ್ಣ ರೈತರು ಮತ್ತು ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಸೇರಿದ ವ್ಯಕ್ತಿಗಳ ಪ್ರಕರಣಗಳನ್ನು ಆಯಾ ದಿನದ ವಿಚಾರಣೆಯಲ್ಲಿ ಆದ್ಯತೆಯ ಮೇಲೆ ತೆಗೆದುಕೊಳ್ಳಬೇಕು. ಅವುಗಳನ್ನು ಆರು ತಿಂಗಳ ಕಾಲಮಿತಿಯಲ್ಲಿ ವಿಚಾರಣೆ ನಡೆಸಿ ಇತ್ಯರ್ಥಪಡಿಸಲು ಅವಕಾಶ ಕಲ್ಪಿಸಲಾಗಿದೆ. ಬಾಕಿ ಪ್ರಕರಣಗಳನ್ನೂ ಕೂಡ ವಿಧೇಯಕ ಜಾರಿಗೆ ಬಂದ ನಂತರ ವಿಚಾರಣೆಗೆ ನಿಗದಿಯಾದ ದಿನಾಂಕದಿಂದ ನಂತರ ಕಾಲಮಿತಿ ಅನ್ವಯಿಸುತ್ತದೆ.

ಕೇಂದ್ರ ಲೋಕಸೇವಾ ಆಯೋಗದಲ್ಲಿ (UPSC) ಖಾಲಿ ಇರುವ ಒಟ್ಟು 71 ಹುದ್ದೆಗಳಿಗೆ ಅರ್ಜಿ ಆಹ್ವಾನ | ಇಲ್ಲಿದೆ ಮಾಹಿತಿ…


Share news

Related Articles

Leave a Reply

Your email address will not be published. Required fields are marked *

Back to top button