Schemes

ರಾಜ್ಯ ಸರ್ಕಾರ : ಮಹಿಳೆಯರಿಗೆ ವರಮಹಾಲಕ್ಷ್ಮಿ ಹಬ್ಬಕ್ಕೆ ಮುಜುರಾಯಿ ಇಲಾಖೆಯ ದೇವಾಲಯಗಳಲ್ಲಿ ಅರಿಶಿಣ-ಕುಂಕುಮ ವಿತರಣೆಗೆ ಆದೇಶ

Share news

ರಾಜ್ಯದ ಮಹಿಳೆಯರಿಗೆ ಸರ್ಕಾರದಿಂದ ಗ್ಯಾರಂಟಿ ಯೋಜನೆಯಾಗಿ ಸಾರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆ, ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2000 ರೂ ನೀಡುವಂತ ಗೃಹಲಕ್ಷ್ಮಿ ಯೋಜನೆ ಜಾರಿಗೊಳಿಸಲಾಗಿದೆ.ಇದರ ಜೊತೆಗೆ ರಾಜ್ಯ ಸರ್ಕಾರದಿಂದ ಆಗಸ್ಟ್.25ರ ವರಮಹಾಲಕ್ಷ್ಮೀ ಹಬ್ಬಕ್ಕೆ ಮತ್ತೊಂದು ಭಾಗ್ಯವನ್ನ ಕಲ್ಪಿಸಲಾಗಿದ್ದು, ಮುಜುರಾಯಿ ಇಲಾಖೆಯ ದೇವಾಲಯಗಳಲ್ಲಿ ಅರಿಶಿಣ-ಕುಂಕುಮ ವಿತರಣೆ ಮಾಡೋದಕ್ಕೆ ಆದೇಶಿಸಲಾಗಿದೆ.

ಕೃಷಿ ಸಂಬಂಧಿತ ಸಮಸ್ಯೆಗಳಿಗೆ ಹೆಲ್ಪ್ ಲೈನ್ ಆರಂಭ | ಇಲ್ಲಿದೆ ಮಾಹಿತಿ …

ಈ ಸಂಬಂಧ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಆಗಸ್ಟ್.25ರಂದು ವರಮಹಾಲಕ್ಷ್ಮೀ ವ್ರತದ ಪ್ರಯುಕ್ತ ದೇವಾಲಯಕ್ಕೆ ಆಗಮಿಸುವ ಮಹಿಳೆಯರಿಗೆ ಅರಿಶಿಣ-ಕುಂಕುಮ ವಿತರಣೆಗೆ ಸೂಚಿಸಲಾಗಿದೆ.

BHARATHAVANI NEWS

ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ಹಾಗೂ ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ | ಇಲ್ಲಿದೆ ಮಾಹಿತಿ..

ಭಾರತೀಯ ಸಂಸ್ಕೃತಿಯಲ್ಲಿ ಸ್ತ್ರೀಯರಿಗೆ / ಹೆಣ್ಣಿಗೆ ಬಹಳ ಮಹತ್ವ ಪೂರ್ಣವಾದ ಸ್ನಾನವನ್ನು ನೀಡಿ ಗೌರವಿಸಲಾಗುತ್ತಿದ್ದು, ಪ್ರತಿ ವರ್ಷ ಶ್ರೀ ವರಮಹಾಲಕ್ಷ್ಮಿ ವ್ರತ, ಸ್ವರ್ಣಗೌರಿ ವ್ರತ ಮತ್ತು ನವರಾತ್ರಿಗಳಲ್ಲಿಯೂ ಸಹ ಸ್ತ್ರೀ ದೇವತೆಯನ್ನು ಪೂಜಿಸಿ ಆರಾಧಿಸಲಾಗುತ್ತದೆ. ಅದರಂತೆ ಪ್ರತಿ ವರ್ಷದ ಶ್ರಾವಣ ಮಾಸದ ಶುಕ್ಲಪಕ್ಷದ ಪೌರ್ಣಮಿಯ ಮೊದಲ ಶುಕ್ರವಾರದಂದು ಶ್ರೀ ವರಮಹಾಲಕ್ಷ್ಮಿ ವ್ರತ ಆಚರಿಸುವುದು ಪುರಾಣೋಕ್ತವಾಗಿದ್ದು, ನಾಡಿನ ಸಮಸ್ತ ಮಹಿಳೆಯರನ್ನು ಗೌರವಿಸುವ ಸಲುವಾಗಿ ಹಾಗೂ ಶ್ರೀ ವರ ಮಹಾಲಕ್ಷ್ಮೀಯವರ ಕೃಪಾಕಟಾಕ್ಷವು ಲಭಿಸಲೆಂದು ಶ್ರೀ ವರಮಹಾಲಕ್ಷ್ಮೀ ವ್ರತದ ದಿನದಂದು ಅಧಿಸೂಚಿತ ದೇವಾಲಯಕ್ಕೆ ಆಗಮಿಸುವ ಮಹಿಳೆಯರಿಗೆ ಆಯಾಯ ದೇವಾಲಯಗಳ ವತಿಯಿಂದ ಉತ್ತಮ ಗುಣಮಟ್ಟದ ಕಸ್ತೂರಿ, ಅರಿಶಿಣ-ಕುಂಕುಮ ಮತ್ತು ಹಸಿರು ಬಳಗಳನ್ನು ಗೌರವ ಸೂಚಕವಾಗಿ ನೀಡುವುದು ಸೂಕ್ತವಾಗಿರುತ್ತದೆ.

ಪಿ.ಎಂ ವಿಶ್ವಕರ್ಮ ಯೋಜನೆಗೆ ಒಪ್ಪಿಗೆ | ಶೇ 5ರ ಬಡ್ಡಿ ದರದಲ್ಲಿ 1 ಲಕ್ಷದ ವರಗೆ ಸುಲಭ ಸಾಲ ಸೌಲಭ್ಯ | ಇಲ್ಲಿದೆ ಮಾಹಿತಿ…

ಕಳೆದ ವರ್ಷದಲ್ಲಿ ಆಚರಿಸಿದಂತೆ ದಿನಾಂಕ:25.08.2023ರ ಶುಕ್ರವಾರದಂದು ಬರುವ ಶ್ರೀ ವರ ಮಹಾಲಕ್ಷ್ಮೀ ವ್ರತದ ದಿನದಂದು ಎಲ್ಲಾ ಅಧಿಸೂಚಿತ ದೇವಸ್ಥಾನಗಳಿಗೆ ಆಗಮಿಸುವ ಮಹಿಳೆಯರಿಗೆ ಆಯಾಯ ದೇವಾಲಯಗಳ ವತಿಯಿಂದ ಉತ್ತಮ ಗುಣಮಟ್ಟದ ಕಸ್ತೂರಿ, ಅರಿಶಿಣ- ಕುಂಕುಮ ಮತ್ತು ಹಸಿರು ಬಳೆಗಳನ್ನು ತಂದು ದೇವರ ಮುಂದೆ ಇಟ್ಟು ಪೂಜಿಸಿ, ಗೌರವ ಪೂರ್ವಕವಾಗಿ ಮಹಿಳೆಯರಿಗೆ ನೀಡುವುದು ಹಾಗೂ ಅದರ ವೆಚ್ಚವನ್ನು ಆಯಾಯ ದೇವಸ್ಥಾನದ ನಿಧಿಯಿಂದ ನಿಯಮಾನುಸಾರ ಭರಿಸಲು ತಿಳಿಸಿದೆ.

ಪ್ರಸಾದ ರೂಪವಾದ ಅರಿಶಿಣ ಕುಂಕುಮವನ್ನು ಕಾಗದದ ಲಕೋಟೆಗಳಲ್ಲಿ ಸರ್ಕಾರದ ಲಾಂಛನದೊಂದಿಗೆ ದೇವಾಲಯದ ಹೆಸರನ್ನು ಮುದ್ರಿಸಿ, ಲಕೋಟೆಯನ್ನು ತಯಾರಿಸಿಕೊಂಡು ದೇವಾಲಯಕ್ಕೆ ಆಗಮಿಸುವ ಮಹಿಳೆಯರಿಗೆ ನೀಡುವುದು ಅಂತ ಆದೇಶದಲ್ಲಿ ತಿಳಿಸಿದೆ.

ಭಾರತೀಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ 1773 ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸುವುದು ಹೇಗೆ ?


Share news

Related Articles

Leave a Reply

Your email address will not be published. Required fields are marked *

Back to top button