shorts

ಕೇರಳ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸುವಂತೆ ಕೇಂದ್ರಕ್ಕೆ ಒತ್ತಾಯ

Share news

ಕೇರಳದ ಹೆಸರನ್ನು ಅಧಿಕೃತವಾಗಿ ‘ಕೇರಳಂ’ ಎಂದು ಬದಲಾಯಿಸುವಂತೆ ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನು ಕೇರಳ ವಿಧಾನಸಭೆ ಸರ್ವಾನುಮತದಿಂದ ಅಂಗೀಕರಿಸಿದೆ. ಭಾರತದ ಸಂವಿಧಾನದ ಎಂಟನೇ ಶೆಡ್ಯೂಲ್‌ನಲ್ಲಿರುವ ಎಲ್ಲ ಭಾಷೆಗಳಲ್ಲಿ ರಾಜ್ಯದ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸಲು ಒತ್ತಾಯಿಸಲಾಗಿದೆ. ಸಿಎಂ ಪಿಣರಾಯಿ ವಿಜಯನ್ ಈ ನಿರ್ಣಯವನ್ನು ಮಂಡಿಸಿದರು. ಇದಕ್ಕೆ ವಿಪಕ್ಷ ಕೂಟವಾದ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಕೂಡ ಸಮ್ಮತಿ ಸೂಚಿಸಿತು. ಧ್ವನಿಮತದಿಂದ ನಿರ್ಣಯ ಅಂಗೀಕರಿಸಲಾಯಿತು.


Share news

Related Articles

Leave a Reply

Your email address will not be published. Required fields are marked *

Back to top button