shortsರಾಷ್ಟ್ರೀಯ

ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆ ಸಮಾರಂಭಕ್ಕೆ ಪ್ರಧಾನಿ ಮೋದಿಗೆ ಔಪಚಾರಿಕ ಆಹ್ವಾನ

Share news

ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ನಿರ್ಮಿಸಲಾಗುತ್ತಿರುವ ಭವ್ಯ ರಾಮ ಮಂದಿರ ನಿರ್ಮಾಣ ಕಾರ್ಯ 2024ರಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಮಂದಿರದ ಗರ್ಭಗುಡಿಯಲ್ಲಿ ಶ್ರೀರಾಮನ ವಿಗ್ರಹದ ಪ್ರತಿಷ್ಠಾಪನೆ ಸಮಾರಂಭಕ್ಕೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಔಪಚಾರಿಕ ಆಹ್ವಾನವನ್ನು ಕಳುಹಿಸಿದೆ.

ಈ ಸಮಾರಂಭವು ಮುಂದಿನ ವರ್ಷದ ಜನವರಿ ತಿಂಗಳಲ್ಲಿ ನಡೆಯಲಿದೆ ಮತ್ತು ಸುಮಾರು 10,000 ಅತಿಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಜನವರಿ 15 ಮತ್ತು 24 ರ ನಡುವೆ ಕಾರ್ಯಕ್ರಮವನ್ನು ನಡೆಸಲು ದಿನಾಂಕಗಳನ್ನು ಗೊತ್ತು ಮಾಡುತ್ತಿದ್ದು, ನಿಖರವಾದ ದಿನಾಂಕವನ್ನು ಪ್ರಧಾನಿ ಮೋದಿ ನಿರ್ಧರಿಸಲಿದ್ದಾರೆ. 


Share news

Related Articles

Leave a Reply

Your email address will not be published. Required fields are marked *

Back to top button