shorts

ಜನವರಿ 21 ರಿಂದ 23ರವರೆಗೆ ಅಯೋಧ್ಯೆಯ ಭವ್ಯ ರಾಮ ಮಂದಿರ ಪ್ರತಿಷ್ಠಾಪನೆ

Share news

ಅಯೋಧ್ಯೆಯ ಭವ್ಯ ರಾಮ ಮಂದಿರದಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ 2024ರ ಜನವರಿ 21, 22 ಹಾಗೂ 23ರಂದು ನಡೆಯಲಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್‌ರಾಯ್‌ ತಿಳಿಸಿದ್ದಾರೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಅವರ ಜತೆಗೆ 25 ಸಾವಿರ ಮಂದಿ ಹಿಂದೂ ಮುಖಂಡರು, ಸಂತರನ್ನೂ ಟ್ರಸ್ಟ್‌ ಆಹ್ವಾನಿಸುತ್ತಿದೆ. ವಿವಿಧ ಪಕ್ಷಗಳ ಮುಖಂಡರೂ ಭಾಗಿಯಾಗಲಿದ್ದು, ಒಟ್ಟು 30 ಸಾವಿರ ಮಂದಿ ದೇಗುಲದ ಒಳಗಡೆ ನಡೆಯಲಿರುವ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.


Share news

Related Articles

Leave a Reply

Your email address will not be published. Required fields are marked *

Back to top button