shorts

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ನೀರಜ್ ಚೋಪ್ರಾ 

Share news

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್’ನ ಜಾವೆಲಿನ್ ಎಸೆತದಲ್ಲಿ ಬಂಗಾರಕ್ಕೆ ಮುತ್ತಿಟ್ಟ ಒಲಿಂಪಿಕ್ ವೀರ ನೀರಜ್ ಚೋಪ್ರಾ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೊಂಡಾಡಿದ್ದಾರೆ. ಹಂಗೇರಿಯ ಬುಡಾಪೆಸ್ಟ್ ನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಫೈನಲ್ ಪಂದ್ಯದಲ್ಲಿ 88.17 ಮೀಟರ್ ದೂರ ಭರ್ಜಿ ಎಸೆಯುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈ ಮೂಲಕ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ದಾಖಲೆ ನಿರ್ಮಿಸಿದ್ದಾರೆ.


Share news

Related Articles

Leave a Reply

Your email address will not be published. Required fields are marked *

Back to top button