ರಾಜ್ಯ

2022ನೇ ಸಾಲಿನ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟ

Share news

ಕರ್ನಾಟಕ ಯಕ್ಷಗಾನ ಅಕಾಡೆಮಿ ಕೊಡಮಾಡುವ ಯಕ್ಷಗಾನದ ಮೂಲಕ ಸಾಧನೆ ಗೈದ ಕಲಾವಿದರನ್ನು ಗುರುತಿಸಿ ಗೌರವಿಸುವ ದೃಷ್ಟಿಯಿಂದ 2022ನೇ ಸಾಲಿನ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ, ಯಕ್ಷಸಿರಿ ಪ್ರಶಸ್ತಿ ಹೀಗೆ ಹಲವು ಪ್ರಶಸ್ತಿಗಳನ್ನು ನೀಡಲು ಆಯ್ಕೆಯಾದ ಕಲಾವಿದರ ಹೆಸರನ್ನು ಪ್ರಕಟಿಸಲಾಗಿದೆ.

ಕರ್ನಾಟಕ ಯಕ್ಷಗಾನ ಅಕಾಡೆಮಿಯ 2022ನೇ ಸಾಲಿನ ಪ್ರಶಸ್ತಿಗಳನ್ನ ‘ಪಾರ್ತಿಸುಬ್ಬ ಪ್ರಶಸ್ತಿ’ಗೆ ಪ್ರಸಂಗಕರ್ತ ಹಾಗೂ ಯಕ್ಷಗಾನ ಗುರು ಗಣೇಶ ಕೊಲೆಕಾಡಿ ಆಯ್ಕೆಗೊಂಡಿದ್ದಾರೆ.

ಯಕ್ಷಗಾನ ಅಕಾಡೆಮಿಯ ‘ಗೌರವ ಪ್ರಶಸ್ತಿ’ಗೆ ತೆಂಕುತಿಟ್ಟಿನ ಯಕ್ಷಗಾನದ ಪ್ರಸಿದ್ಧ ಭಾಗವತರು ಪುತ್ತಿಗೆ ರಘುರಾಮ ಹೊಳ್ಳ‌, ತೆಂಕುತಿಟ್ಟು ಖ್ಯಾತ ಭಾಗವತರು ಪಟ್ಲ ಸತೀಶ್ ಶೆಟ್ಟಿ , ಮೂಡಲಪಾಯ ಯಕ್ಷಗಾನ ಭಾಗವತರು ಹಾಗೂ ಕಲಾವಿದರು ಭಾಗವತ ಚಂದಯ್ಯ, ಭಾಗವತರು ಹಾಗೂ ಪಾರಂಪರಿಕ ಯಕ್ಷಗಾನ ಕಲಾವಿದ ಭಾಗವತ ಉಮೇಶ ಭಟ್ ಬಾಡ ಮತ್ತು ಭಾಗವತರು ಹಾಗೂ ಬಡಗುತಿಟ್ಟು ಯಕ್ಷಗಾನ ಕಲಾವಿದರು ಕೆ.ಪಿ. ಹೆಗಡೆ ಆಯ್ಕೆಯಾಗಿದ್ದಾರೆ.

ಯಕ್ಷಸಿರಿ ಪ್ರಶಸ್ತಿಗೆ ಕೊಲ್ಯಾರು ರಾಜು ಶೆಟ್ಟಿ, ಕೃಷ್ಣ ಗಾಣಿಗ (ಕುಷ್ಟ) ಕೋಡಿ, ಕೃಷ್ಣ ನಾಯ್ಕ ಜಿ. ಬೇಡ್ಕಣಿ, ಶುಭಾನಂದ ಶೆಟ್ಟಿ, ಬಾಲಕೃಷ್ಣ ನಾಯಕ್, ಕವ್ವಾಳೆ ಗಣಪತಿ ಭಾಗ್ವತ, ಎಸ್.ಪಿ. ಅಪ್ಪಯ್ಯ, ಡಿ. ಭೀಮಯ್ಯ, ಕೊಲ್ಲೂರು ಕೊಗ್ಗ ಆಚಾರ್ಯ, ಅಜಿತ್ ಕುಮಾರ್ ಜೈನ್,

ದತ್ತಿನಿಧಿ ಪ್ರಶಸ್ತಿ ‘ಕರ್ಕಿ ಹಿರಿಯ ಪರಮಯ್ಯ ಹಾಸ್ಯಗಾರ ಪ್ರಶಸ್ತಿ’ಯನ್ನು ಹುಕ್ಕಲಮಕ್ಕಿ ಕಮಲಾಕರ ಹೆಗಡೆ ಅವರಿಗೆ ನೀಡಲಾಗುತ್ತಿದೆ.

2021ನೇ ಸಾಲಿನ ಪುಸ್ತಕ ಬಹುಮಾನಕ್ಕೆ ನಿತ್ಯಾನಂದ ಕಾರಂತ ಅವರ ‘ಯಕ್ಷಗಾನ ಪ್ರಸಂಗ ಸಂಪುಟ’ ಪುಸ್ತಕ, ಎಲ್‌.ಎಸ್. ಶಾಸ್ತ್ರಿ ಅವರ ‘ಯಕ್ಷಗಾನ ನಕ್ಷತ್ರಗಳು’ ಪುಸ್ತಕ ಹಾಗೂ ಬೆಂಗಳೂರಿನ ವಿದ್ಯಾರಶ್ಮಿ ಪೆಲತ್ತಡ್ಕ ಅವರ ‘ಯಕ್ಷಗಾನ ಲೀಲಾವಳಿ’ ಪುಸ್ತಕಗಳು ಆಯ್ಕೆಯಾಗಿದೆ.

ಸೆಪ್ಟೆಂಬರ್ ತಿಂಗಳ ಎರಡು ಅಥವಾ ಮೂರನೇ ವಾರದಲ್ಲಿ ಉಡುಪಿಯ ಕಮಲಶಿಲೆಯಲ್ಲಿ ನಡೆಯಲಿದೆ. ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ’ ಎಂದು ಜಿ.ಎಲ್. ಹೆಗಡೆ ತಿಳಿಸಿದರು.


Share news

Related Articles

Leave a Reply

Your email address will not be published. Required fields are marked *

Back to top button