ರಾಜ್ಯ

ಸ್ವಾತಂತ್ರದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಲು ಸರ್ಕಾರ ಸೂಚನೆ

Share news

ಭಾರತ 75 ವರ್ಷಗಳ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಆಗಸ್ಟ್ 11 ರಿಂದ 17 ರವರೆಗೆ ರಾಜ್ಯದ ಎಲ್ಲಾ ಶಾಲಾ, ಕಾಲೇಜು, ಮದರಸಾಗಳ ಮೇಲೆ ಕಡ್ಡಾಯವಾಗಿ ರಾಷ್ಟ್ರ ಧ್ವಜ ಹಾರಿಸಬೇಕು ಮತ್ತು ಮಕ್ಕಳಲ್ಲಿ ರಾಷ್ಟ್ರ ಭಕ್ತಿಯನ್ನು ಬೆಳೆಸಲು ಶಾಲಾ ಕಾಲೇಜುಗಳಲ್ಲಿ ಸ್ಪರ್ಧೆಗಳನ್ನು ಏರ್ಪಡಿಸಲು ಕರ್ನಾಟಕ ರಾಜ್ಯ ಸರ್ಕಾರ ನಿರ್ಧರಿಸಿದೆ.

ಸರ್ಕಾರದ ಆದೇಶದಂತೆ, ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ರಾಷ್ಟ್ರಭಕ್ತಿ ಮೂಡಿಸುವ ಸ್ವಾತಂತ್ರ್ಯದ ತ್ಯಾಗ, ಬಲಿದಾನವನ್ನು ಸಾರುವ ಗೀತಾ ಗಾಯನ ಸ್ಪರ್ಧೆ,ಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಸ್ವಾತಂತ್ರ್ಯ ಹೋರಾಟಗಾರರ ಚಿತ್ರ ಬಿಡಿಸುವ ಸ್ಪರ್ಧೆ, ಸ್ವಾತಂತ್ರ್ಯ ಹೋರಾಟಗಾರರ ವೇಷಭೂಷಣ ಸ್ಪರ್ಧೆ ಆಯೋಜಿಸಬೇಕೆಂದು ತಿಳಿಸಲಾಗಿದೆ.

ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ, ಅನುದಾನ ರಹಿತ ಕಿರಿಯ ಪ್ರಾಥಮಿಕ,ಹಿರಿಯ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಲ್ಲಿ ಸ್ವಾತಂತ್ರೋತ್ಸವದ ಸ್ಪರ್ಧೆಗಳನ್ನು ಶಾಲಾ ಕಾಲೇಜು ಮಟ್ಟದಲ್ಲಿ ಏರ್ಪಡಿಸಿ ಸ್ವಾತಂತ್ರ್ಯ ದಿನಾಚರಣೆಯಂದು ಸೂಕ್ತವಾದ ಬಹುಮಾನ ನೀಡಿ ಪ್ರೋತ್ಸಾಹಿಸಲು ಕರ್ನಾಟಕ ಸರ್ಕಾರ ಸುತ್ತೋಲೆ ನೀಡಿದೆ.


Share news

Related Articles

Leave a Reply

Your email address will not be published. Required fields are marked *

Back to top button