ರಾಜ್ಯ

ಸರಕಾರಿ ನಿಗದಿತ ಶುಲ್ಕ ಆಯಾ ಕಾಲೇಜಿನ ಶೈಕ್ಷಣಿಕ ಅಭಿವೃದ್ಧಿಗೆ ಮೀಸಲು : ಸಚಿವ ಅಶ್ವಥ್ ನಾರಾಯಣ

Share news

ತಾಂತ್ರಿಕ ಶಿಕ್ಷಣ ಹಾಗೂ ಕಾಲೇಜು ಇಲಾಖೆಯ 430 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳು, 91 ಪಾಲಿಟೆಕ್ನಿಕ್‌ಗಳು ಮತ್ತು 14 ಎಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಂದ ತೆಗೆದುಕೊಳ್ಳುವ ಸರ್ಕಾರಿ ನಿಗದಿತ ಶುಲ್ಕಗಳನ್ನು ಆಯಾ ಕಾಲೇಜಿನ ಶೈಕ್ಷಣಿಕ ಅಭಿವೃದ್ಧಿಗೆ ಬಳಸುವಂತೆ ಆದೇಶ ಹೊರಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

‘ಶಿಕ್ಷಣ ಸಂಸ್ಥೆಗಳಿಗೆ ಆರ್ಥಿಕ ಸ್ವಾಯತ್ತತೆ ನೀಡಬೇಕು ಮತ್ತು ಈ ಮೂಲಕ ಆಯಾಯ ಸಂಸ್ಥೆಗಳು ಸುಗಮವಾಗಿ ಸಂಪನ್ಮೂಲ ಕ್ರೋಡೀಕರಣ ಮಾಡಿಕೊಳ್ಳಲು ಅವಕಾಶ ನೀಡಬೇಕೆನ್ನುವುದು ಸರಕಾರದ ಆಶಯವಾಗಿದೆ. ಹೀಗಾಗಿ, ಸರ್ಕಾರಿ ಶುಲ್ಕಗಳ ಸದ್ಬಳಕೆಗೆ ಕ್ರೋಡೀಕೃತ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಈ‌ ಬಾರಿಯ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರಲಿದೆ’ ಎಂದು ಸಚಿವ ಅಶ್ವಥ್ ನಾರಾಯಣ ತಿಳಿಸಿದ್ದಾರೆ. ಇದಕ್ಕಾಗಿ ಮೇಲ್ಕಂಡ ಸಂಸ್ಥೆಗಳ ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ಸಮಿತಿಗಳು ರಚನೆಯಾಗಲಿದೆ.

ಶೈಕ್ಷಣಿಕ ಅಭಿವೃದ್ಧಿಯ ದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಗೊಂಡಿದ್ದು, ಕಾಲೇಜಿನ ಅಭಿವೃದ್ಧಿ ಮತ್ತು ಅನೇಕ ಯೋಜನೆಗಳನ್ನು ಜಾರಿಗೆ ತರಲು ಶುಲ್ಕವು ಸಹಾಯವಾಗಲಿದೆ. ಹಾಗೇ ಸರ್ಕಾರಿ ಕಾಲೇಜುಗಳಿಗೆ ಕನಿಷ್ಠ 1500 ವಿದ್ಯಾರ್ಥಿಗಳ ದಾಖಲಾತಿಗೊಳ್ಳುವಂತೆ ಮಾಡಬೇಕು. ಶುಲ್ಕದ ಹೆಚ್ಚಿನ ಭಾಗವನ್ನು ಆಯಾ ಕಾಲೇಜುಗಳು ಬಳಸಿಕೊಂಡು ಕಟ್ಟಡಗಳ ನಿರ್ವಹಣೆ, ದುರಸ್ತಿ, ಗ್ರಂಥಾಲಯಕ್ಕೆ ಪುಸ್ತಕ ಮತ್ತು ನಿಯತಕಾಲಿಕೆಗಳ ಖರೀದಿ, ಪ್ರಯೋಗಾಲಯಗಳ ಉಪಕರಣ, ಇಂಟರ್‍‌ನೆಟ್‌, ಕಚೇರಿ ವೆಚ್ಚ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಮುಂತಾದವುಗಳಿಗೆ ಬಳಸಿಕೊಳ್ಳಬಹುದು ಎಂದು ಸಚಿವರು ತಿಳಿಸಿದ್ದಾರೆ.


Share news

Related Articles

Leave a Reply

Your email address will not be published. Required fields are marked *

Back to top button