ರಾಜ್ಯ

ರಾಜ್ಯದ ಪದವಿ,ಸ್ನಾತಕೋತ್ತರ ವಿಭಾಗಗಳಿಗೆ ಏಕರೂಪದ ಶೈಕ್ಷಣಿಕ ವೇಳಾಪಟ್ಟಿ : ಅಶ್ವಥ್ ನಾರಾಯಣ

Share news

ಮೊದಲ ಬಾರಿಗೆ ರಾಜ್ಯದಲ್ಲಿ 2022-2023ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಪದವಿ ಹಾಗೂ ಸ್ನಾತಕೋತ್ತರ ವಿಭಾಗಗಳಿಗೆ ಏಕರೂಪದ ಶೈಕ್ಷಣಿಕ ವೇಳಾಪಟ್ಟಿಯನ್ನು ರೂಪಿಸಿದ್ದು, ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಕಡ್ಡಾಯವಾಗಿ ಪಾಲಿಸುವಂತೆ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು ತಮ್ಮದೇ ಆದ ಶೈಕ್ಷಣಿಕ ವೇಳಾಪಟ್ಟಿಯನ್ನು ರೂಪಿಸಿಕೊಳ್ಳುತ್ತಿದ್ದವು.ಇದರಿಂದ ಅನೇಕ ಗೊಂದಲಗಳು ಆಗುತ್ತಿತ್ತು, ಹಾಗಾಗಿ ಮೊದಲ ಬಾರಿಗೆ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಒಂದೇ ಶೈಕ್ಷಣಿಕ ವೇಳಾಪಟ್ಟಿ ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ. ಏಕರೂಪದ ವೇಳಾಪಟ್ಟಿಯಂತೆ ರಾಜ್ಯದಲ್ಲಿ ಪದವಿ ತರಗತಿಗಳಿಗೆ ಜುಲೈ 11ರಿಂದ ಪ್ರವೇಶಾತಿ ಆರಂಭವಾಗಲಿದ್ದು, ಆಗಸ್ಟ್ 17ರಿಂದ 22ರ ನಡುವೆ ತರಗತಿಗಳು ಆರಂಭವಾಗಲಿವೆ. ಸ್ನಾತಕೋತ್ತರ ಕೋರ್ಸ್‌ಗಳಿಗೆ ಅಕ್ಟೋಬರ್ 15ರಿಂದ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದ್ದು, ನವೆಂಬರ್ 2ರಿಂದ 14ರ ನಡುವೆ ತರಗತಿಗಳು ಪ್ರಾರಂಭವಾಗಲಿದೆ ಎಂದು ತಿಳಿಸಲಾಗಿದೆ.


Share news

Related Articles

Leave a Reply

Your email address will not be published. Required fields are marked *

Back to top button