ಭಾರತದ ಸರ್ವೋಚ್ಚ ನ್ಯಾಯಾಲಯವು ಶಿಕ್ಷಣದಲ್ಲಿ ಪದವಿ (ಬಿ.ಎಡ್) ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮಾನ್ಯವಾದ ಅರ್ಹತೆ ಅಲ್ಲ ಎಂದು ಪುನರುಚ್ಚರಿಸಿದೆ. ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಪ್ರಾಥಮಿಕ ಶಿಕ್ಷಣದಲ್ಲಿ ಡಿಪ್ಲೋಮಾ ಅತ್ಯಗತ್ಯ ಎಂದು ಹೇಳಿದೆ.
ನ್ಯಾಯಮೂರ್ತಿ ಅವಿರುದ್ಧ ಬೋಸ್ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯ ಅವರನ್ನೊಳಗೊಂಡ ಪೀಠವು ದೇವೇಶ್ ಶರ್ಮ ವರ್ಸಸ್ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಹಿಂದಿನ ತೀರ್ಪನ್ನು ಉಳಿಸಿಕೊಂಡು ತೀರ್ಪು ನೀಡಿದೆ.
ಭಾರತೀಯ ಸಂವಿಧಾನದ 21 ಎ ಮತ್ತು ಶಿಕ್ಷಣ ಹಕ್ಕು ಕಾಯ್ದೆ, 2009ರ ಅಡಿಯಲ್ಲಿ ಖಾತ್ರಿಪಡಿಸಲಾದ ಭಾರತದಲ್ಲಿ ಪ್ರಾಥಮಿಕ ಶಿಕ್ಷಣದ ಮೂಲಭೂತ ಹಕ್ಕು 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ‘ಉಚಿತ ಮತ್ತು ಕಡ್ಡಾಯ’ ಶಿಕ್ಷಣವನ್ನು ಒಳಗೊಂಡಿರುತ್ತದೆ ಎಂದು ಪೀಠವು ಅಭಿಪ್ರಾಯಪಟ್ಟಿದೆ. ಮಕ್ಕಳಿಗೆ ನೀಡಬೇಕಾದ ಗುಣಮುಟ್ಟದ ಶಿಕ್ಷಣವನ್ನು ಸಹ ಒಳಗೊಂಡಿದೆ.
ಆದ್ದರಿಂದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಕಲಿಸಲು ಮೂಲಭೂತ ಶಿಕ್ಷಣದ ಮಿತಿಯನ್ನು ಹಾದು ಹೋಗದ ಕಾರಣ ಬಿಎಡ್ ಪದವಿ ಹೊಂದಿರುವವರು
‘ಗುಣಮಟ್ಟದ’ ಶಿಕ್ಷಣವನ್ನು ನೀಡಲು ಸಾಧ್ಯವಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸಮರ್ಥಿಸಿಕೊಂಡಿದೆ.